Belagavi: ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದ ದ್ರಾಕ್ಷಿ ನಾಶ

1 min read
Belagavi Saaksha Tv

ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದ ದ್ರಾಕ್ಷಿ ನಾಶ

ಬೆಳಗಾವಿ: ಅಕಾಲಿಕ ಮಳೆಯಿಂದ ಬೆಳಗಾವಿಯ ಅಥಣಿ ತಾಲೂಕಿನಾದ್ಯಂತ ಅಪಾರ ಪ್ರಮಾಣದ ದ್ರಾಕ್ಷಿ ಬೆಳೆಗಳು ನಾಶವಾಗಿದ್ದು, ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ತಾಲೂಕಿನ ಅಡಹಳ್ಳಿ, ಕೋಹಳ್ಳಿ, ಐಗಳಿ, ಕೋತನಟ್ಟಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಪರೀತ ಗಾಳಿ ಸಮೇತ ಮಳೆಯಾಗಿದೆ. ಹೀಗಾಗಿ ಒಣದ್ರಾಕ್ಷಿ ನೀರಿನಲ್ಲಿ ನೆನೆದು ಭಾರಿ ಹಾನಿ ಸಂಭವಿಸಿದ್ದು ರೈತನಿಗೆ ದಿಕ್ಕೆಟ್ಟಂತಾಗಿದೆ.

ನವೆಂಬರ್- ಅಕ್ಟೋಬರ್ ತಿಂಗಳಿನಲ್ಲಿ ದ್ರಾಕ್ಷಿ ಬೆಳೆಗಾರರಿಗೆ ಅಕಾಲಿಕ ಮಳೆಯಿಂದ ಭಾರಿ ನಷ್ಟ ಸಂಭವಿಸಿತ್ತು. ಇದೀಗ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಅದರಲ್ಲಿ ಅಳಿದು ಉಳಿದ ದ್ರಾಕ್ಷಿಯನ್ನು ರೈತರು ಒಣ ಹಾಕಿದ ಸಂದರ್ಭದಲ್ಲಿ ಹಠಾತ್ತನೆ ಮಳೆ ಬಂದ ಪರಿಣಾಮ ಒಣದ್ರಾಕ್ಷಿ ನೀರಿನಲ್ಲಿ ನೆನೆದು ರೈತರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಇನ್ನೇನು ಈ ವಾರದಲ್ಲಿ ಮಾರಾಟವಾಗಬೇಕಿದ್ದ ಒಣದ್ರಾಕ್ಷಿ ಮಳೆ ನೀರಿನಲ್ಲಿ ನೆನೆದ ಪರಿಣಾಮ, ರೈತರನ್ನು ಚಿಂತೆಗೀಡು ಮಾಡಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd