ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗುವ ಮುನ್ಸೂಚನೆ ಇದ್ದು, ಕೆಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡನ ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಮಲೆನಾಡಿನ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ ರಾಜ್ಯದ ಅಲ್ಲಲ್ಲಿ ಉತ್ತಮ ಮಳೆಯಾಗಿದೆ. ಕಲಬುರಗಿ ಹಾಗೂ ರಾಯಚೂರಿನಲ್ಲಿ 44.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹಲವೆಡೆ ಮಳೆರಾಯ ತಂಪು ಸುರಿಯುತ್ತಿದ್ದು ಜನರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.