Tamil Nadu – ಭಾರಿ ಮಳೆ | ತಮಿಳುನಾಡಿನ ಶಾಲಾ – ಕಾಲೇಜುಗಳಿಗೆ ರಜೆ
ಚೆನ್ನೈ : ತಮಿಳುನಾಡು ಮತ್ತು ಪುದುಚೇರಿಯ ಹಲವಾರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಕಲ್ಲಕುರಿಚಿ. ಸೇಲಂ, ವೆಲ್ಲೂರು, ತಿರುಪತ್ತೂರು, ರಾಣಿಪೇಟ್, ತಿರುವಣ್ಣಾಮಲೈ ಮತ್ತು ಪುದುಚೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಹೀಗಾಗಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಪ್ಪಟ್ಟು, ರಾಣಿಪೇಟ್, ವೆಲ್ಲೂರ್, ಜಿಲ್ಲೆಗಳಿಲ್ಲಿನ ಶಾಲಾ – ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಇದಲ್ಲದೆ ರಾಣಿಪ್ಪೆಟ್ಟೈ, ತಿರುವಣ್ಣಾಮಲೈ, ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ಚೆಂಗಲ್ ಪಟ್ಟು, ತಿರುವಣ್ಣಾಮಲೈನಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








