ರಾಜ್ಯದಲ್ಲಿ ಡಿಸೆಂಬರ್ 3ರವರೆಗೆ ವರ್ಷಧಾರೆ Rain saaksha tv
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಡಿಸೆಂಬರ್ 3ರವರೆಗೆ ವರ್ಷಧಾರೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ರಾಜ್ಯದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಡಿಸೆಂಬರ್ 3 ರವರೆಗೆ ಮಳೆ ಬೀಳುವ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆ ಸಂಭವವಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ.
ಅಂದಹಾಗೆ ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದೆ ಬಿದ್ದ ಅಕಾಲಿಕ ಮಳೆ ನಾನಾ ಅವಾಂತರಗಳನ್ನು ಸೃಷ್ಠಿಸಿದೆ. ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.









