ಬೆಂಗಳೂರು: ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಬಹುತೇಕ 8 ವಲಯಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈಗಾಗಲೇ ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗಿದೆ. ಬಹುತೇಕ ಕಡೆ 20 ಸೆ.ಮೀನಿಂದ 10 ಸೆ.ಮೀವರೆಗೆ ಮಳೆಯಾಗಿದೆ.
ಅಲ್ಲದೇ, ಇನ್ನೂ ಮೂರು ದಿನ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಸುಮಾರು 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ತಿಂಗಳಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.