Rain | ರಾಜ್ಯದ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ಬೆಂಗಳೂರು : ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರದಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ ಎಂದು ತಿಳಿಸಿದೆ.
ಇದಲ್ಲದೆ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ಹೀಗಾಗಿ ಈ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಆಗಾಗ ತುಂತುರು ಮಳೆಯಾಗುತ್ತಿದೆ.