ಇಂದಿನಿಂದ 5 ದಿನಗಳ ಕಾಲ ರಾಜ್ಯಾದ್ಯಾಂತ ಭಾರೀ ಮಳೆ – ಯೆಲ್ಲೋ ಅಲರ್ಟ್..!
ಬೆಂಗಳೂರು : ಇಂದಿನಿಂದ 5 ದಿನಗಳ ಕಾಲ ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡದಲ್ಲಿ ಇಂದಿನಿಂದ ಏಪ್ರಿಲ್ 16 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನೂ ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಹಾಸನ ಮತ್ತು ಶಿವಮೊಗ್ಗದಲ್ಲಿ ಏಪ್ರಿಲ್ 14 ರಿಂದ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾಯುಭಾರ ವ್ಯತ್ಯಾಸವಾಗುತ್ತಿದ್ದು, ದಕ್ಷಿಣ ದ್ವೀಪಕಲ್ಪ ಪ್ರದೇಶದಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತ ಕಾಣಿಸಿಕೊಂಡಿದೆ. ಇದರ ಪರಿಣಾಮ ದೇಶದ ದಕ್ಷಿಣ ಭಾಗದ ರಾಜ್ಯಗಳಲ್ಲಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..
ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿ, ಸಿಡಿಲು, ಗುಡುಗು ಸಹಿತ ಮಳೆ ಬೀಳುವ ನಿರೀಕ್ಷೆ ದಟ್ಟವಾಗಿದೆ. ತಮಿಳುನಾಡು, ಕೇರಳ, ಮಹಾರಾಷ್ಟ್ರ ಮತ್ತು ಕರ್ನಾಟಕದ ಒಳನಾಡುಗಳಲ್ಲಿಯೂ ಹೆಚ್ಚಿನ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.