ಮಂಡ್ಯ: ಕೊಡಗು ಜಿಲ್ಲೆಯಾದ್ಯಂತ ಒಂದು ವಾರದಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೀವನದಿ ಕಾವೇರಿ ಮೈದುಂಬಿಕೊಳ್ಳುತ್ತಿದ್ದಾಳೆ.
ಹೀಗಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‍ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಹಂತ ಹಂತವಾಗಿ ಏರಿಕೆಯಾಗುತ್ತಿದೆ. ಜಲಾಶಯಕ್ಕೆ ನೀರಿನ ಒಳ ಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗುತ್ತಿದ್ದು, 16 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಹೀಗಾಗಿ 124 ಅಡಿ ಸಾಮಥ್ರ್ಯದ ಕೆಆರ್‍ಎಸ್ ಜಲಾಶಯದ ನೀರಿನ ಮಟ್ಟ 106 ಅಡಿ ದಾಟಿದೆ. ಇದೇ ರೀತಿಯ ಒಳ ಹರಿವು ಹೆಚ್ಚಾದರೆ ಮುಂದಿನ 15 ದಿನದಲ್ಲಿ ಜಲಾಶಯ ಭರ್ತಿ ಸಾಧ್ಯತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.








