Rainfall | 4 ದಿನ ಕರ್ನಾಟಕದಲ್ಲಿ ಭಾರೀ ಮಳೆ!
ಹವಾಮಾನ ಇಲಾಖೆ ಮುನ್ಸೂಚನೆ
ಜೂನ್ 3 ರಿಂದ ಜೂನ್ 7 ರವರೆಗೆ ಮಳೆ
ಬೆಂಗಳೂರು ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್
ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ
ಬೆಂಗಳೂರು : ಮುಂದಿನ ನಾಲ್ಕು ದಿನಗಳ ರಾಜ್ಯದಾದ್ಯಂತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ ಕೊಡಗು ಜಿಲ್ಲೆಗಳಲ್ಲಿ ಜೂನ್ ಮೂರರಿಂದ ಜೂನ್ ಏಳರ ವರೆಗೂ ಮಳೆಯಾಗಲಿದೆ.
ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದಲ್ಲದೇ ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಇತ್ತ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.
ಮತ್ತೊಂದು ಕಡೆ ಇಂದಿನಿಂದ ನಾಲ್ಕು ದಿನಗಳವರೆಗೆ ಕೇರಳ, ಮಾಹೆ ಮತ್ತು ಲಕ್ಷದೀಪಗಳಲ್ಲಿ ಗುಡುಗು ಮತ್ತು ಮಿಂಚಿನ ಸಹಿತ ಸಾಧಾರಣ ಮಳೆಯಾಗಲಿದೆ.
ಜೂನ್ 6 ರವರೆಗೆ ಕರ್ನಾಟಕದಾದ್ಯಂತ ಸಾಕಷ್ಟು ವ್ಯಾಪಕವಾದ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.