ಗಮನಿಸಿ : ರಾಜ್ಯದಲ್ಲಿ ಏ.10 ವರೆಗೆ ಮಳೆ Rainfall – ಹವಾಮಾನ ಇಲಾಖೆ
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವಾರು ಜಿಲ್ಲೆಯಲ್ಲಿ ವರ್ಷಧಾರೆಯಾಗಲಿದೆ. ಇಂದಿನಿಂದ ಏಪ್ರಿಲ್ 10 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಚಾಮರಾಜನಗರ, ಮೈಸೂರು, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬೀಳಲಿದ್ದು, ಏಪ್ರಿಲ್ 7 ಹಾಗೂ ಏಪ್ರಿಲ್ 8 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಭಾಗದಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 9 ರಿಂದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ಧಾರವಾಡ, , ರಾಯಚೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಡಿದೆ.