ಇಂದಿನಿಂದ ಬೆಂಗಳೂರು ಸೇರಿದಂತೆ ಈ ಪ್ರದೇಶಗಳಲ್ಲಿ ಮಳೆ ಸಾಧ್ಯತೆ
ನವದೆಹಲಿ : ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಕರ್ನಾಟಕದ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಹೀಗಾಗಿ, ಇಂದಿನಿಂದ ಮೂರು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಇಂದಿನಿಂದ ಡಿ. 20ರವರೆಗೆ ಬೆಂಗಳೂರು, ಚಾಮರಾಜನಗರ, ಮೈಸೂರು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರಿನಲ್ಲಿ ಮಳೆಯಾಗಲಿದೆ.
ಇನ್ನು ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗದಲ್ಲಿ ಒಣಹವೆ ಮುಂದುವರಿಯಲಿದೆ. ಇಂದು ಹಲವು ಕಡೆ ಹಗುರವಾದ ಮಳೆ, ಇನ್ನೂ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಬೀಳುವ ಸಾಧ್ಯತೆಯಿದೆ.
ಇದಲ್ಲದೆ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶಗಳಲ್ಲಿ ಇಂದು ವಿಪರೀತ ಚಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









