ಉಡುಪಿ : ಕರಾವಳಿ ಜಿಲ್ಲೆಯಲ್ಲಿ ಮುಂಗಾರು ಪ್ರವೇಶ ಮಾಡಿರುವ ಲಕ್ಷಣಗಳು ಗೋಚರಿಸಿದ್ದು, ಉಡುಪಿ (Udupi Rain) ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ.
ಜಿಲ್ಲೆಯ ಕುಂದಾಪುರ, ಬೈಂದೂರು, ಉಡುಪಿ ತಾಲೂಕಿನ ಹಲವು ಪ್ರದೇಶಗಳಲ್ಲಿ ಭರ್ಜರಿ ಮಳೆಯಾಗಿದೆ. ಈಗಾಗಲೇ ಹವಾಮಾನ ಇಲಾಖೆ (Weather Department)ಯು ಮಳೆ ಮುನ್ಸೂಚನೆ ನೀಡಿದೆ. ರಾತ್ರಿ ಗುಡುಗು ಸಹಿತ ಸುಮಾರು ಅರ್ಧ ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ. ವ್ಯಾಪಕ ಬಿಸಿಲಿನಿಂದ ಕೂಡಿದ್ದ ವಾತಾವರಣ ಈಗ ತಂಪಾಗಿದೆ.
ಪಶ್ಚಿಮ ಘಟ್ಟದ ತಪ್ಪಲಿನಲ್ಲಿ 35 ಮಿಲಿ ಮೀಟರ್ ನಷ್ಟು ಮಳೆ ಬಿದ್ದಿದೆ. ಕಾರ್ಕಳ ಕಾಪು ತಾಲೂಕಿನ ಕೆಲವೆಡೆ ಮಳೆಯಾಗಿದೆ. ಅಲ್ಲದೇ, ಇಂದು ಉಡುಪಿ ಜಿಲ್ಲೆಯಲ್ಲೆ ಯೊಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದ್ದು, ಮಳೆಯಾಗುವ ನಿರೀಕ್ಷೆ ಇದೆ.