ಬೆಂಗಳೂರು : ರಾಜ್ಯ ಬಿಜೆಪಿಯ ಮಾಸ್ ಲೀಡರ್. ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸಾರ್ವಜನಿಕ ಜೀವನಕ್ಕೆ ಬಂದು ನಲವತ್ತೈದು ವರ್ಷಗಳಾಗುತ್ತಿರುವ ಹಿನ್ನೆಲೆ ಫೆಬ್ರವರಿ 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ. 27 ರ ಸಂಜೆ ಐದು ಗಂಟೆಗೆ ಅರಮನೆ ಆವರಣದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಯಡಿಯೂರಪ್ಪ ಅವರ ಬದುಕು-ಸಾಧನೆಯ ವಿವರಗಳನ್ನೊಳಗೊಂಡ ದಣಿವರಿಯದ ಧೀಮಂತ ಎಂಬ ಅಭಿನಂದನಾ ಗ್ರಂಥ ಬಿಡುಗಡೆಯಾಗಲಿದೆ. ಈ ಕಾರ್ಯಕ್ರಮವನ್ನು ಕೇಂದ್ರ ಸಚಿವ ರಾಜನಾಥ ಸಿಂಗ್ ಅವರು ಉದ್ಘಾಟಿಸಲಿದ್ದಾರೆ. ಅಭಿನಂದನಾ ಗ್ರಂಥವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರು ಬಿಡುಗಡೆ ಮಾಡಲಿದ್ದಾರೆ.
ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೂ ಸಹ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದು, ಬಿಎಸ್ ವೈ ಕುರಿತ ಕಾಫಿ ಟೇಬಲ್ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ಹಾಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು, ಅಪ್ರತಿಮ ಎಂಬ ಸಾಕ್ಷ್ಯ ಚಿತ್ರವನ್ನು ಬಿಡುಗಡೆ ಮಾಡಲಿದ್ದಾರೆ. ಉಳಿದಂತೆ ಹಿರಿಯ ಸಾಹಿತಿ ಸಿದ್ಧಲಿಂಗಯ್ಯ ಅವರು ಅಭಿನಂದನಾ ನುಡಿಗಳನ್ನಾಡಲಿದ್ದು, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಸುರೇಶ್ ಅಂಗಡಿ, ಪ್ರಹ್ಲಾದ್ ಜೋಶಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!
ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...








