78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವಿಟ್ಟರ್ ನಲ್ಲಿ ಶುಭಕೋರಿದ್ದಾರೆ. “ಪ್ರೀತಿಯ ಬಿ.ಎಸ್ ಯಡಿಯೂರನವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ರಾಜಕೀಯ ಹೋರಾಟವನ್ನೇ ಬದುಕಿನ ಮಾರ್ಗವನ್ನಾಗಿ ಮಾಡಿಕೊಂಡು ಯಶಸ್ಸನ್ನು ಸಾಧಿಸಿದ ನಿಮಗೆ, ಇನ್ನಷ್ಟು ಕಾಲ ಪಕ್ಷಕ್ಕೆ ಮಾರ್ಗದರ್ಶನ ನೀಡುವ ಅವಕಾಶ ಒದಗಿ ಬರಲಿ, ಜೊತೆಗೆ ಆಯುರಾರೋಗ್ಯದ ಭಾಗ್ಯ ನಿಮ್ಮದಾಗಲಿ ಎಂದು ಆಶಿಸುವೆ” ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.









