ಕೋವಿಶೀಲ್ಡ್ ಲಸಿಕೆಯ 2ನೇ ಡೋಸ್‍ ಪಡೆದ ರಜನಿಕಾಂತ್

1 min read

ಕೋವಿಶೀಲ್ಡ್ ಲಸಿಕೆಯ 2ನೇ ಡೋಸ್‍ ಪಡೆದ ರಜನಿಕಾಂತ್

ಚೆನ್ನೈ:  ದೇಶದಲ್ಲಿ ಕೋವಿಡ್ 2ನೇ ಅಲೆಯಿಂದಾಗಿ ಜನ ತ್ತರಿಸಿಹೋಗಿದ್ದಾರೆ.. ಮತ್ತೊಂದೆಡೆ ಲಸಿಕೆ ಅಭಿಯಾನವೂ ಪ್ರಗತಿಯಲ್ಲಿದ್ದುಮ ಅನೇಕ ಸಿನಿಮಾ ತಾರೆಯರು ಈಗಾಗಲೇ ಲಸಿಕೆ ಪಡೆದಿದ್ದಾರೆ. ಇದೀಗ ತಮಿಳಿನ ಸೂಪರ್ ಸ್ಟಾರ್ ರಜನಿ ಕಾಂತ್ ಅವರು ಕೋವಿಶೀಲ್ಡ್ ಲಸಿಕೆಯ 2ನೇ ಡೋಸ್‍ ಪಡೆದಿದ್ದಾರೆ.

ಈ ಕುರಿತಂತೆ ರಜನಿಕಾಂತ್ ಪುತ್ರಿ, ಸೌಂದರ್ಯ ರಜನಿಕಾಂತ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಲಸಿಕೆ ಪಡೆಯುತ್ತಿರುವ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದು, ತಲೈವರ್ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಬನ್ನಿ ಕೊರೊನಾ ವಿರುದ್ಧ ಒಟ್ಟಾಗಿ ಹೋರಾಡಿ ಗೆಲವು ಸಾಧಿಸೋಣ ಎಂದು ಬರೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ಕೊರೊನಾ ಹಾವಳಿ ನಡುವೆಯೂ ರಜನಿಕಾಂತ್ ಬಹುನಿರೀಕ್ಷೆಯ ಅಣ್ಣಾತ್ತೆ ಸಿನಿಮಾದ ಚಿತ್ರೀಕರಣ ಮುಗಿಸಿ ಹೈದರಾಬಾದ್ ನಿಂದ ಚೆನ್ನೈಗೆ ಹಿಂದಿರುಗಿದ್ದಾರೆ.

ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್  ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..

ಈ ನಡುವೆ  ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ  ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.

ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd