Rajani kanth : ರಜನಿ ಪುತ್ರಿ ಐಶ್ವರ್ಯಗೆ ಕೋವಿಡ್ ಪಾಸಿಟಿವ್…!!
ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರ ಹಿರಿಯ ಪುತ್ರಿ ಐಶ್ವರ್ಯಾ ಅವರಿಗೆ ಕೊರೊನಾ ಪಾಸಿಟಿವ್ ರುವುದು ದೃಢವಾಗಿದೆ.. ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಐಶ್ವರ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಅವರು ಇನ್ಸ್ಟಾಗ್ರಾಂ ಮೂಲಕ ಮಾಹಿತಿ ನೀಡಿದ್ದಾರೆ..
ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿಕೊಂಡಿರುವ ಅವರು, ಎಲ್ಲ ಮುನ್ನೆಚ್ಚರಿಕೆಗಳ ನಡುವೆಯೂ ನನಗೆ ಕೋವಿಡ್ ಪಾಸಿಟಿವ್ ಬಂದಿದ್ದು, ನಾವು ಆಸ್ಪತ್ರೆಗೆ ದಾಖಲಾಗಿದ್ದೇನೆ. ದಯಮಾಡಿ ನೀವೆಲ್ಲ ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಳ್ಳಿ, ಅವಶ್ಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಿ ಸುರಕ್ಷಿತವಾಗಿರಿ ಎಂದು ಮನವಿ ಮಾಡಿದ್ದಾರೆ. ಜೊತೆಗೆ ತಾವು ಆಸ್ಪತ್ರೆಯಲ್ಲಿ ಫೋಟೋವನ್ನೂ ಕೂಡ ಹಂಚಿಕೊಂಡಿದ್ದಾರೆ..
rajanikanth’s daughter aishwarya tests positive for covid19 – saakshatv
ಐಶ್ವರ್ಯಾ ತಮಿಳಿನ ಸ್ಟಾರ್ ನಟ ಧನುಶ್ ಜೊತೆಗೆ ಇತ್ತೀಚೆಗಷ್ಟೇ ಡಿವೋರ್ಸ್ ಪಡೆಯುವ ಸುದ್ದಿ ಬಹಿರಂಗಪಡಿಸಿದ್ದರು.. ತಮ್ಮ 18 ವರ್ಷದ ದಾಂಪತ್ಯಕ್ಕೆ ಅಂತ್ಯವಾಡ್ತಿರುವುದಾಗಿ ಧನುಶ್ ಹಾಗೂ ಐಶ್ವರ್ಯ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು.. ಈ ಸುದ್ದಿ ಅಭಿಮಾನಿಗಳಿಗೆ ದೊಡ್ಡ ಶಾಕ್ ನೀಡಿತ್ತು..









