ರಾಜ್ಯ ಸರ್ಕಾರದ ಸಚಿವ ಸ್ಥಾನದಿಂದ ಕೆ.ಎನ್. ರಾಜಣ್ಣ ಅವರನ್ನು ವಜಾಗೊಳಿಸಿರುವ ವಿಷಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ನಡುವಲ್ಲೇ, ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಣ್ಣ ವಜಾ ವಿಚಾರ ಮುಂದಿನ ದಿನಗಳಲ್ಲಿ ಮರುಕಳಿಸಬಾರದು. ಇದು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಬೇಕು, ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಹಿಂದುಳಿದ ವರ್ಗ, ಪರಿಶಿಷ್ಟ ವರ್ಗ ಎಂಬ ವಿಭಜನೆ ಇಲ್ಲ. ನಾವೆಲ್ಲರೂ ಸರ್ವಧರ್ಮಿಯರು. ಪಕ್ಷ ಭೇದಭಾವದ ರಾಜಕಾರಣ ಮಾಡುವುದಿಲ್ಲ. ಜಾತಿಯ ಹೆಸರಿನಲ್ಲಿ ರಾಜಕಾರಣ ಮಾಡುವುದು ಬಿಜೆಪಿ ಶೈಲಿ, ಕಾಂಗ್ರೆಸ್ ಅದನ್ನು ಅನುಸರಿಸುವುದಿಲ್ಲ, ಎಂದು ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ರಾಜಣ್ಣ ವಜಾದ ಹಿನ್ನೆಲೆ, ಕಾಂಗ್ರೆಸ್ ಒಳಗಿನ ನಾಯಕತ್ವ, ಹಾಗೂ ಭವಿಷ್ಯದಲ್ಲಿ ಈ ರೀತಿಯ ಘಟನೆಗಳನ್ನು ತಪ್ಪಿಸುವ ಅಗತ್ಯತೆ ಬಗ್ಗೆ ಹರಿಪ್ರಸಾದ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.








