ನಾನೇ ಬಿಜೆಪಿ ಅಭ್ಯರ್ಥಿ ಎಂದು ಭಾವಿಸಿ ಮತದಾನ ಮಾಡಿದ್ದೇನೆ : ಅಶೋಕ್
ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆ ಕಂದಾಯ ಸಚಿವ ಆರ್.ಅಶೋಕ್ ಅವರು ತಮ್ಮ ಪತ್ನಿ ಸಮೇತರಾಗಿ ಮತದಾನ ಬಂದು ಜಾಲಹಳ್ಳಿಯ ಸೈಂಟ್ ಕ್ಲಾರೆಟ್ ಶಾಲೆಯ ಮತಕೇಂದ್ರ ದಲ್ಲಿ ಹಕ್ಕು ಚಲಾಯಿಸಿದ್ದಾರೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನಾನೇ ಬಿಜೆಪಿ ಅಭ್ಯರ್ಥಿ ಎಂದು ಭಾವಿಸಿ ಇಂದು ಮತದಾನ ಮಾಡಿದ್ದೇನೆ.
ಕಳೆದ 15 ದಿನಗಳಲ್ಲಿ ನಾವು ಏನೇನು ಹೇಳಬೇಕು ಏನೇನು ಕೇಳಬೇಕು ಎಲ್ಲವೂ ಕೇಳಿ ಬಿಟ್ಟಿದ್ದೇವೆ. ಇಂದು ಮತದಾರರಾದ ನಿಮ್ಮ ಸರದಿ. ದಯವಿಟ್ಟು ಮತಗಟ್ಟೆಗೆ ಬಂದು ಮತದಾನ ಮಾಡಿ.
ಬೆಂಗಳೂರು, ಆರ್‌ಆರ್ ನಗರದ ಅಭಿವೃದ್ಧಿಗಾಗಿ ಮತ ಚಲಾಯಿಸಿ ಎಂದು ಮನವಿ ಮಾಡಿದರು.
ಇದೇ ವೇಳೆ ಮತದಾನಕ್ಕೆ ಜನರ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬಗ್ಗೆ ಮಾತನಾಡಿದ ಕಂದಾಯ ಸಚಿವರು, ಸಂಜೆ ಆರು ಗಂಟೆಯೊಳಗೆ ಎಲ್ಲರೂ ಮತದಾನ ಮಾಡಲು ಬರುತ್ತಾರೆ ಎಂಬ ವಿಶ್ವಾಸ ಇದೆ.
ಇದನ್ನೂ ಓದಿ : ರಾಜಕಾರಣಿಗೂ ಭಿಕ್ಷೆ ಬೇಡುವವನಿಗೂ ವ್ಯತ್ಯಾಸವಿಲ್ಲ : ಮುನಿರತ್ನ
ಕೋವಿಡ್ ಹಿನ್ನೆಲೆ, ಚುನಾವಣಾ ಆಯೋಗ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಮತದಾನ ಮಾಡಲು ಯಾವುದೇ ಸಮಸ್ಯೆ ಇಲ್ಲ. ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಮತದಾನ ನಡೆಯುತ್ತಿದೆ ಎಂದರು. ಹಾಗೇ ತಪ್ಪದೇ ಮತದಾನ ಮಾಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.
ಇದೇ ವೇಳೆ ಮುನಿರತ್ನ ಮಾತನಾಡಿ ನಾನು ಮತ ಭಿಕ್ಷೆ ಕೇಳಿದ್ದೇನೆ. ಮತದಾರರು ಮತ ಭಿಕ್ಷೆ ನೀಡುವ ವಿಶ್ವಾಸವಿದೆ. ರಾಜಕಾರಣಿಗೂ ಭಿಕ್ಷೆ ಬೇಡುವವನಿಗೂ ಯಾವುದೇ ವ್ಯತ್ಯಾಸವಿಲ್ಲ. ಭಿಕ್ಷೆ ಬೇಡುವವರು ಅಮ್ಮ ಊಟ ಎನ್ನುತ್ತಾನೆ, ನಾವು ಅಮ್ಮ ಮತ ನೀಡಿ ಎನ್ನುತ್ತೇವೆ ಎಂದರು.
ಕೊರೊನಾ ಸಂದರ್ಭದಲ್ಲಿ ಮತದಾನ ಮಾಡುವುದು ವಿಶೇಷ ಅನುಭವ ನೀಡಲಿದೆ. 18 ವರ್ಷದ ಯುವಕ ತನ್ನ ಮೊದಲ ಮತದಾನದಲ್ಲಿ ಭಾಗಿಯಾಗುತ್ತಿದ್ದರೆ, ಇವತ್ತಿನ ಮತದಾನ ಇತಿಹಾಸದಲ್ಲಿ ಉಳಿಯುತ್ತದೆ.
ಏಕೆಂದರೆ ಕೊರೊನಾ ಕಾರಣದಿಂದ ಚುನಾವಣಾ ಆಯೋಗ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಕೊರೊನಾಗೆ ಹೆದರಿಕೊಳ್ಳುವ ಅಗತ್ಯವಿಲ್ಲ, ಶಾಂತಿಯುತ ಮತದಾನ ನಡೆಯುತ್ತಿದೆ.
ಇದನ್ನೂ ಓದಿ : ಮಿನಿ ಸಮರ ಸೋತ್ರೆ ಡಿಕೆಶಿ ನಾಯಕತ್ವಕ್ಕೆ ಸಣ್ಣ ಮುಕ್ಕು
ಕೈಗೆ ಗ್ಲೌಸ್, ಫೇಸ್ ಮಾಸ್ಕ್ ಹಾಕಿಕೊಂಡು ಸ್ಯಾನಿಟೈಸರ್ ಬಳಕೆ ಮಾಡಿ ಕೊರೊನಾ ಸಂದರ್ಭದಲ್ಲಿ ಮತದಾನ ಮಾಡಿದ ಅನುಭವ ಜೀವನದಲ್ಲಿ ನೆನಪಿನಲ್ಲಿ ಉಳಿಯುತ್ತೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಕ್ಷೇತ್ರದ ಮತದಾರರು ಬುದ್ಧಿವಂತರಾಗಿದ್ದಾರೆ. ಎಲ್ಲರೂ ಖಂಡಿತ ಬಂದು ಮತ ಚಲಾಯಿಸುತ್ತಾರೆ. ಯಾರಿಗಾದರೂ ಮತ ಹಾಕಿ ಆದರೆ ಎಲ್ಲರೂ ಮತದಾನ ಮಾಡಿ ಎಂದು ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿಕೊಂಡರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










