ಜೈಪುರ: ಇಂದು ಆರ್ ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಆದರೆ, ಈ ಪಂದ್ಯದ ಮೂಲಕ ರಾಜಸ್ಥಾನ ತಂಡವು ಮಹಿಳಾ ಸಬಲೀಕರಣಕ್ಕೆ ಮುಂದಾಗಿದೆ.
ಹೀಗಾಗಿ ಇಂದು ರಾಜಸ್ಥಾನ್ ಆಟಗಾರರು ಪಿಂಕ್ ಬಣ್ಣದ ವಿಶೇಷ ಜೆರ್ಸಿ ಧರಿಸಿ ಕಣಕ್ಕೆ ಇಳಿಯಲಿದ್ದಾರೆ. ಮಹಿಳೆಯರಿಗೆ ನೆರವಾಗುವ ಉದ್ದೇಶದಿಂದ #PinkPromise ಅಭಿಯಾನ ಆರಂಭಿಸಿದೆ. ಈ ಪಂದ್ಯದ ಪ್ರತಿ ಟಿಕೆಟ್ ಬೆಲೆಯಲ್ಲಿ 100 ರೂ. ಗಳನ್ನು ಮಹಿಳಾ ಸಬಲೀಕರಣ ಕಾರ್ಯಕ್ಕೆ ಬಳಸಲು ತಂಡ ನಿರ್ಮಿಸಿದೆ.
ಅಲ್ಲದೇ, ʻಆಲ್ ಪಿಂಕ್ ರಾಯಲ್ಸ್ʼ ಜೆರ್ಸಿ ಮಾರಾಟದ ಮೊತ್ತವನ್ನೂ ಇದಕ್ಕೆ ವಿನಿಯೋಗಿಸಲಿದೆ. ರಾಜಸ್ಥಾನ-ಆರ್‌ಸಿಬಿ ತಂಡಗಳು ಈ ಪಂದ್ಯದಲ್ಲಿ ಸಿಡಿಸುವ ಪ್ರತಿ ಸಿಕ್ಸರ್‌ಗೆ ಜೈಪುರ ಜಿಲ್ಲೆಯ ಸಂಭರ್ ಗ್ರಾಮದ ಪ್ರತಿ 6 ಮನೆಗಳಿಗೆ ಸೌರಶಕ್ತಿ ಒದಗಿಸಲು ಫ್ರಾಂಚೈಸಿ ನಿರ್ಧಿರಿಸಿದೆ.
ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರತಿ ಆವೃತ್ತಿಯ ಒಂದು ಪಂದ್ಯದಲ್ಲಿ ಹಸಿರು ಪರಿಸರ ಜಾಗೃತಿ ದೃಷ್ಟಿಯಿಂದ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದೆ. ಗುಜರಾತ್ ಟೈಟಾನ್ಸ್ ತಂಡವು ಕಳೆದ ಬಾರಿ ಅನ್ನನಾಳದ ಕ್ಯಾನ್ಸರ್ ಕುರಿತು ಜಾಗೃತಿಗಾಗಿ ಲ್ಯಾವೆಂಡರ್ ಬಣ್ಣದ ಜೆರ್ಸಿ ತೊಟ್ಟಿತ್ತು. ಕಳೆದ ಬಾರಿ ಪ್ಲೇ ಆಫ್ ಹಾಗೂ ಫೈನಲ್ ಪಂದ್ಯಗಳಲ್ಲಿನ ಪ್ರತಿ ಡಾಟ್ ಬಾಲ್ ಗೆ 500 ಸಸಿ ನೆಡುವ ಅಭಿಯಾನ ಕೈಗೊಳ್ಳಲಾಗಿತ್ತು.