ಚಿತ್ರರಂಗದ ಖ್ಯಾತ ನಟರಾದ ಬಿಗ್ ಬಿ ಹಾಗೂ ರಜನಿಕಾಂತ್ ಬರೋಬ್ಬರಿ 32 ವರ್ಷಗಳ ನಂತರ ಒಂದಾಗಲು ಮುಂದಾಗಿದ್ದಾರೆ. ಸದ್ಯ ಈ ಸುದ್ದಿ ಬಾಲಿವುಡ್ ಅಂಗಳದಲ್ಲಿ ಸದ್ದು ಮಾಡುತ್ತಿದೆ.
ಮೂರು ದಶಕದ ಬಳಿಕ ರಜನಿಕಾಂತ್ ಮತ್ತು ಅಮಿತಾಭ್ ಬಚ್ಚನ್ ಒಂದಾಗಿ ನಟಿಸಲು ಮುಂದಾಗಿದ್ದಾರೆ. ಈ ಸ್ಟಾರ್ ಜೋಡಿ ಒಂದಾಗಿ ಅಭಿಮಾನಿಗಳಿಗೆ ರಸದೌತಣ ನೀಡಲು ಮುಂದಾಗಿದ್ದಾರೆ. ಇಬ್ಬರು ಒಟ್ಟಾಗಿ ಕಾಣಿಸಿಕೊಳ್ಳಲು ಕೌಂಟ್‌ಡೌನ್ ಶುರುವಾಗಿದೆ.
ಲೈಕಾ(Lyca Productions) ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ, ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ.
ಈವರಿಬ್ಬರು ಹಿಂದೆ ಅಂದಾ ಕಾನೂನ್, ಗೆರಾಫ್ತಾರ್ ಮತ್ತು ಹಮ್ ಸಿನಿಮಾಗಳಲ್ಲಿ ನಟಿಸಿದ್ದರು. ಈ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದವು. ಈಗ ಮತ್ತೆ ಒಂದಾಗಿರುವ ಈ ಜೋಡಿಗೆ ಲೈಕಾ ಪ್ರೊಡಕ್ಷನ್ ಹಣ ಹಾಕುತ್ತಿದೆ.ಬಹಳ ಅದ್ಧೂರಿಯಾಗಿ ಮೂಡಿ ಬರಲಿರುವ ಈ ಪ್ರಾಜೆಕ್ಟ್ ಮುಂದಿನ ತಿಂಗಳ ಅಂತ್ಯಕ್ಕೆ ಟೇಕಾಫ್ ಆಗಲಿದೆ ಎಂದು ತಿಳಿದು ಬಂದಿದೆ.