ಆಸ್ಪತ್ರೆಗೆ ದಾಖಲಾದ ಸೂಪರ್ ಸ್ಟಾರ್ ರಜನಿ Rajinikanth saaksha tv
ಚೆನ್ನೈ : ಹಠಾತ್ ಅನಾರೋಅಗ್ಯದ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಜನಿಕಾಂತ್ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಚೆನ್ನೈನ ಅಲ್ವಾರ್ ಪೇಟ್ನಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಜನಿಕಾಂತ್ ಅವರು ಫುಲ್ ಬಾಡಿ ಚೆಕಪ್ ಗಾಗಿ ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಲತಾ ರಜನಿಕಾಂತ್ ಅವರು ಮಾಹಿತಿ ನೀಡಿದ್ದು, ಸದ್ಯ ಅವರು ಆರೋಗ್ಯವಾಗಿದ್ದು, ಅಭಿಮಾನಿಗಳು ಆತಂಕ ಪಡಬೇಡಿ ಎಂದು ಮನವಿ ಮಾಡಿದ್ದಾರೆ.
ಅಂದಹಾಗೆ ಅಕ್ಟೋಬರ್ 25ರಂದು ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಜನಿಕಾಂತ್ ಅವರಿಗೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು 2019ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು.