ಸೂಪರ್ ಸ್ಟಾರ್ (Superstar) ರಜನಿಕಾಂತ್ (Rajinikanth) ಅವರು ಹಿಮಾಲಯಕ್ಕೆ ಆಗಾಗ ಹೋಗುವುದು ಗುಟ್ಟಾಗಿ ಏನು ಉಳಿದಿಲ್ಲ. ಆದರೆ, ಅವರು ಅಲ್ಲಿ ಏನು ಮಾಡುತ್ತಾರೆ? ಎಲ್ಲಿರುತ್ತಾರೆ? ಎಂಬುವುದು ಎಲ್ಲರ ಪ್ರಶ್ನೆಯಾಗಿತ್ತು. ಸದ್ಯ ಇದಕ್ಕೆ ಉತ್ತರ ಸಿಕ್ಕಿದೆ.
ಕನ್ನಡದ ಬರಹಗಾರ ಸುಪ್ರೀತ್ ಕೆ.ಎನ್ ಬರೆದಿದ್ದಾರೆ. ಅವರು ಸ್ವತಃ ರಜನಿಯನ್ನು ಭೇಟಿ ಮಾಡಿದ್ದಾರೆ. ಈ ಕುರಿತು ಸನ್ಯಾಸಿಗಳು ಹೇಳಿದ್ದಾರೆ. ರಜನಿಕಾಂತ್ ಆಗಾಗ ಹಿಮಾಲಯಕ್ಕೆ ಬರುತ್ತಾರೆ. ಹೋಗುವಾಗ ಹೃಷಿಕೇಶದ ಈ ಆಶ್ರಮಕ್ಕೆ ಬಂದು ಉಳಿದುಕೊಳ್ಳುವುದು ಸಾಮಾನ್ಯ. ಪ್ರಧಾನಿ ಮೋದಿ, ರಜನಿಕಾಂತ್ ಹೀಗೆ ಅನೇಕರಿಗೆ ದಯಾನಂದ ಸರಸ್ವತೀ ಸ್ವಾಮಿಗಳು ಆಧ್ಯಾತ್ಮ ಗುರುಗಳು. ಹಾಗಾಗಿ ಆಶ್ಚರ್ಯವಾಗಲಿಲ್ಲ ಎಂದು ಬರೆದುಕೊಂಡಿದ್ದಾರೆ.
ಪುಟ್ಟ ಸಭಾಂಗಣದಲ್ಲಿ ಇದ್ದದ್ದು ಹೆಚ್ಚೆಂದರೆ 50 ಜನ. ಭಾರತ ಚಿತ್ರರಂಗದ ಸೂಪರ್ ಸ್ಟಾರ್ ಇಲ್ಲಿ ಬಂದಿರುವುದು ನಮಗೆ ಖುಷಿ ತಂದಿದೆ, ಇವತ್ತು ಅವರ ಸಿನಿಮಾ ಬಿಡುಗಡೆ ಆಗ್ತಿದೆ, ಅವರಿಗೆ ಒಳ್ಳೆದಾಗ್ಲಿ ಎಂದಾಗ, ಆ ಸ್ಟಾರ್ಗಿರಿಗೂ ತಮಗೂ ಸಂಬಂಧವೇ ಇಲ್ಲ ಎನ್ನುವಂತಹ ಭಾವ ಮುಖದಲ್ಲಿ ಬಂದಿತು ಎಂದು ಬರೆದುಕೊಂಡಿದ್ದಾರೆ.
ರಜನಿಕಾಂತ್ ಅವರಿಗೆ ಆಶ್ರಮ, ಹಿಮಾಲಯ ಇವೆಲ್ಲಾ ಯಾಕೆ ಬೇಕು? ಕೋಟಿ ಕೋಟಿ ಹಣ, ಅಭಿಮಾನಿಗಳು ಎಲ್ಲ ಇದ್ದಾರಲ್ಲ, ಆರೋಗ್ಯ ಕೈ ಕೊಟ್ರೆ ಒಳ್ಳೆ ಆಸ್ಪತ್ರೆಗೆ ಸೇರೊದಿರಲಿ, ಆಸ್ಪತ್ರೆಯನ್ನೇ ಕೊಂಡುಕೊಳ್ಳಬಹುದು. ಇಷ್ಟೆಲ್ಲಾ ಇದ್ದು ಅವರಿಗೆ ಒಂದು ಸತ್ಯ ಅರಿವಾಗಿದೆ. ಸರ್ವಂ ವ್ಯರ್ಥಂ ಮರಣ ಸಮಯೇ ಸಾಂಬ ಏಕ ಸಹಾಯಕಃ (ಮರಣ ಸಮಯದಲ್ಲಿ ಶಿವನೊಬ್ಬನೇ ಸಹಾಯಕ್ಕೆ ಬರೋದು, ಉಳಿದದ್ದೆಲ್ಲಾ ವ್ಯರ್ಥ) ಎಂದು ಸುಪ್ರೀತ್ ಬರೆದುಕೊಂಡಿದ್ದಾರೆ.








