ರಾಮನಗರ: ರಾಜೀವ್ ಗಾಂಧಿ ವೈದ್ಯಕೀಯ ವಿವಿಯನ್ನ ರಾಮನಗರದಲ್ಲೇ ಸ್ಥಾಪಿಸಲಾಗುವುದು ಎಂದು ಡಿಕೆಶಿ ಹೇಳಿದ್ದಾರೆ. ಅಲ್ಲದೇ, ವಿವಿ ಸ್ಥಾಪನೆಗೆ 600 ಕೋಟಿ ರೂ. ಬಿಡುಗಡೆ ಮಾಡಿ ಡಿಸಿಎಂ ಆದೇಶ ಹೊರಡಿಸಿದ್ದಾರೆ.
ಕನಕಪುರದಲ್ಲಿ ವಿವಿ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಜ್ಜಾಗಿತ್ತು. ಆದರೆ, ಈಗ ರಾಮನಗರದಲ್ಲೇ ಸ್ಥಾಪಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್, ರಾಮನಗರದಲ್ಲಿ ವಿವಿ, ಕಟ್ಟಡ ಬಗ್ಗೆ ಚರ್ಚೆ ಮಾಡಿದ್ದೇವೆ.
ಜಾಗದ ವಿಚಾರವಾಗಿ ಕೆಲವು ಕಾನೂನು ತೊಡಕುಗಳಿದ್ದವು. ಈ ವರ್ಷ ರಾಮನಗರದಲ್ಲಿ ಮೆಡಿಕಲ್ ಕಾಲೇಜಿಗೆ ಬೇಕಾದ ತಯಾರಿ ನಡೆಯುತ್ತಿದೆ ಎಂದು ಡಿಕೆಶಿ ಹೇಳಿದ್ದಾರೆ.