ರಾಜೀವ್ ಗಾಂಧಿ ಜನ್ಮದಿನ : `ಕೈ’ ನಾಯಕರ ಗೌರವ ನಮನ Rajiv Gandhi’s
ನವದೆಹಲಿ : ಇಂದು ಭಾರತ ರತ್ನ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 77ನೇ ಜನ್ಮದಿನ.
ಈ ಹಿನ್ನೆಲೆಯಲ್ಲಿ ದೇಶದ ರಾಜ್ಯಕೀಯ ಗಣ್ಯರು ರಾಜೀವ್ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸುತ್ತಿದ್ದಾರೆ.
ದೆಹಲಿಯಲ್ಲಿರುವ ರಾಜೀವ್ ಗಾಂಧಿ ಸಮಾಧಿ ವೀರ್ ಭೂಮಿಗೆ ತೆರಳಿದ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಗೌರವ ನಮನ ಸಲ್ಲಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಂದೆಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಪ್ರಾರ್ಥನೆ ಸಲ್ಲಿಸಿದರು.
ಇನ್ನು ರಾಜೀವ್ ಗಾಂಧಿ 1984 ರಿಂದ 1989ರವರೆಗೆ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು.
ಆಗಸ್ಟ್ 20, 1944ರಲ್ಲಿ ಇವರು ಜನಿಸಿದ್ದರು. 40ರ ವಯಸ್ಸಿನಲ್ಲಿ ರಾಜೀವ್ ಗಾಂಧಿ ಪ್ರಧಾನಿ ಹುದ್ದೆಗೇರಿದ್ದು, 1991ರಲ್ಲಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ಪ್ರಚಾರದ ವೇಳೆ ಹತ್ಯೆಗೈದಿದ್ದರು.








