ಮಹಿಳೆಯರಿಗೆ ಸಶಸ್ತ್ರಪಡೆಗಳಲ್ಲಿ ಹೆಚ್ಚಿನ ಅವಕಾಶ ನೀಡಲು 100 ಸೈನಿಕ ಶಾಲೆಗಳ ಪ್ರಾರಂಭ : ರಾಜನಾಥ್ ಸಿಂಗ್
ನವದೆಹಲಿ : ರಾಷ್ಟ್ರದಲ್ಲಿ ಮಹಿಳೆಯರಿಗೆ ಸಶಸ್ತ್ರಪಡೆಗಳನ್ನು ಸೇರಲು ಸೈನಿಕ ಶಾಲೆಗಳು ಹೆಚ್ಚಿನ ಅವಕಾಶಗಳನ್ನು ಒದಗಿಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಸೈನಿಕ ಶಾಲೆಗಳ ವೆಬಿನಾರ್ ನಲ್ಲಿ ಭಾಗವಹಿಸಿದ್ದ ಸಿಂಗ್ ಅವರು, ಹೆಣ್ಣು ಮಕ್ಕಳಿಗೆ ಸಶಸ್ತ್ರಪಡೆಗಳಲ್ಲಿ ಹೆಚ್ಚಿನ ಅವಕಾಶ ನೀಡಲು 100 ಸೈನಿಕ ಶಾಲೆಗಳನ್ನು ಪ್ರಾರಂಭಿಸುತ್ತಿರುವುದಾಗಿ ಘೋಷಿಸಿದರು.
ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಆ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸುತ್ತಿದ್ದು, ಮಹಿಳೆಯರ ಹಾದಿಯನ್ನು ಸುಗಮಗೊಳಿಸಲು ಸೈನಿಕ ಶಾಲೆಯಲ್ಲಿ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೇ ಸೈನಿಕ ಶಾಲೆಗಳು ಮಕ್ಕಳನ್ನು ಸಮರ್ಥ ನಾಗರಿಕರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವ ನಿರ್ಧಾರವು ದೇಶಕ್ಕೆ ಸೇವೆ ಸಲ್ಲಿಸುವ ತಮ್ಮ ಕನಸುಗಳನ್ನು ನನಸಾಗಿಸಲು ಮಹಿಳೆಯರನ್ನು ಉತ್ತೇಜಿಸುತ್ತದೆ ಎಂದಿದ್ದಾರೆ.