Rajouri Terror Attack : ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರ ದಾಳಿ – 4 ಮಂದಿ ಸಾವು
ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದಾರೆ..
ಈ ದಾಳಿಯಲ್ಲಿ 4 ಜನ ನಾಗರೀಕರು ಮೃತಪಟ್ಟಿದ್ದು , ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ..
ಘಟನೆಯಲ್ಲಿ 6 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜೌರಿ ಪಟ್ಟಣದಿಂದ ಸುಮಾರು 8 ಕಿಮೀ ದೂರದಲ್ಲಿರುವ ಡ್ಯಾಂಗ್ರಿ ಎಂಬ ಗ್ರಾಮದ ಮೂರು ಮನೆಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಡ್ಯಾಂಗ್ರಿ ಗ್ರಾಮದಲ್ಲಿ ಮೂರು ಮನೆಗಳಲ್ಲಿ ವಾಸಿಸುತ್ತಿದ್ದ ನಾಗರಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಆಗ 10 ಮಂದಿ ಗಾಯಗೊಂಡಿದ್ದರು. ಈ ಪೈಕಿ ಮೂವರು ಆಸ್ಪತ್ರೆ ತಲುಪುವುದಕ್ಕೆ ಮೊದಲೇ ಮೃತಪಟ್ಟರು. ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರನ್ನು ಸತೀಶ್ ಕುಮಾರ್ (45), ದೀಪಕ್ ಕುಮಾರ್ (23), ಪ್ರೀತಮ್ ಲಾಲ್ (57) ಮತ್ತು ಶಿಶುಪಾಲ್ (32) ಎಂದು ಗುರುತಿಸಲಾಗಿದೆ..
ಡ್ಯಾಂಗ್ರಿ ಗ್ರಾಮದ ಮೇಲೆ ದಾಳಿ ಮಾಡಿದ ಇಬ್ಬರು ಉಗ್ರರನ್ನು ಹಿಡಿಯಲು ಸೇನೆ ಮತ್ತು ಸಿಆರ್ ಪಿಎಫ್ ನೊಂದಿಗೆ ಪೊಲೀಸರು ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಕೇಶ್ ಸಿಂಗ್ ಹೇಳಿದ್ದಾರೆ.