ಸಿದ್ದರಾಮಯ್ಯರನ್ನ ನಾನೇ ಬಿಜೆಪಿಗೆ ಕರೆ ಇರ್ತೀನಿ : ರಾಜೂಗೌಡ
ಬೆಂಗಳೂರು : ಸಿದ್ದರಾಮಯ್ಯ ಅವರನ್ನು ಬಿಜೆಪಿಗೆ ಕರೆತಲು ನಾನು ಶತ ಪ್ರಯತ್ನ ಮಾಡುತ್ತಿದ್ದೇನೆ.
ನಾನು ಸಕ್ಸಸ್ ಆಗುತ್ತೇನೆ ಎನ್ನುವ ನಂಬಿಕೆ ನನಗೆ ಇದೆ ಎಂದು ರಾಜೂಗೌಡ ಹೇಳಿದ್ದಾರೆ.
ಕೆಲ ಬಿಜೆಪಿಗರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ಮಾಜಿ ಸಿಎಂ ಬಿಎಸ್ ವೈ ಹೇಳಿಕೆ ಬಗ್ಗೆ ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ ರಾಜೂಗೌಡ, ನಾವೇಲ್ಲರೂ ಬಿಜೆಪಿಯಲ್ಲಿಯೇ ಇರುತ್ತೇವೆ.
ರಾಜ್ಯದಲ್ಲಿ ಮತ್ತೆ ಬಿಜೆಪಿಯಿಂದಲೇ ಗೆದ್ದು ಮಂತ್ರಿಗಳಾಗುತ್ತೇವೆ. ಕಾಂಗ್ರೆಸ್ ನಿಂದ ಕೆಲವು ಶಾಸಕರಿಗೆ ಕರೆ ಬಂದಿದೆ.
ಯಾವ ಶಾಸಕರು ಎಂದು ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಅವರನ್ನು ಬಿಜೆಪಿಗೆ ಕರೆತಲು ನಾನು ಶತ ಪ್ರಯತ್ನ ಮಾಡುತ್ತಿದ್ದೇನೆ.
ನಾನು ಸಕ್ಸಸ್ ಆಗುತ್ತೇನೆ ಎನ್ನುವ ನಂಬಿಕೆ ನನಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ನವರೇ ಬಿಜೆಪಿಗೆ ಬರಲು ಸಿದ್ಧರಾಗಿದ್ದಾರೆ ಎಂದು ಬಾಂಬ್ ಸಿಡಿಸಿದ ರಾಜೂಗೌಡ, ನಮ್ಮವರು ಯಾರು ಪಕ್ಷ ಬಿಟ್ಟು ಹೋಗಲು ತಯಾರಿಲ್ಲ ಎಂದು ಮತ್ತೆ ಸ್ಪಷ್ಟಪಡಿಸಿದ್ದಾರೆ.









