ಡಿಕೆಶಿ ಹುಚ್ಚಾಸ್ಪತ್ರೆಗೆ ಸೇರಿದ್ರೆ ಸರ್ಕಾರದಿಂದ ಉಚಿತ ಚಿಕಿತ್ಸೆ : ರಾಜೂಗೌಡ
ಹಾವೇರಿ : ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಚ್ಚಾಸ್ಪತ್ರೆಗೆ ಸೇರಿದರೇ ಸರ್ಕಾರಿದಿಂದ ಉಚಿತ ಚಿಕಿತ್ಸೆ ನೀಡುವುದಾಗಿ ಶಾಸಕ ರಾಜೂಗೌಡ ಹೇಳಿದ್ದಾರೆ.
ತಮ್ಮ ಪಕ್ಷದ ಅಭ್ಯರ್ಥಿ ಪರ ಇಂದು ಹಾನಗಲ್ ನಲ್ಲಿ ರಾಜೂಗೌಡ ಪ್ರಚಾರ ನಡೆಸಿದರು. ಈ ವೇಳೆ ಸಿದ್ದುಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಅಧ್ಯಕ್ಷರು ಹುಚ್ಚಾಸ್ಪತ್ರೆಗೆ ಭೇಟಿ ನೀಡ್ತೀವಿ ಅಂತ ಹೇಳಿದ್ದಾರೆ. ಅವರು ಭೇಟಿ ನೀಡಿದರೆ ಖಂಡಿತ ನಾವು ಹಣ್ಣು-ಹಂಪಲು ತಗೊಂಡು ನಾವು ಆರೋಗ್ಯ ವಿಚಾರಿಸಿ ಬರುತ್ತೇವೆ. ಕೊರೊನಾಗೆ ಹೇಗೆ ಫ್ರೀ ಟ್ರೀಟ್ಮೆಂಟ್ ಕೊಟ್ಟಿದ್ರೋ ಅದೇ ರೀತಿ ಹುಚ್ಚಾಸ್ಪತ್ರೆಯ ಚಿಕಿತ್ಸಾ ವೆಚ್ಚ ಭರಿಸುವಂತೆ ಸಿಎಂಗೆ ಮನವರಿಕೆ, ಮನವಿ ಮಾಡುತ್ತೇವೆ. ಅಧ್ಯಕ್ಷರಾದ ಮೇಲೆ ಎಲ್ಲಾ ಚುನಾವಣೆ ಸೋತಿದ್ದಾರೆ. ಸೋತ ಮೇಲೆ ಪಾಪ ಎಲ್ಲಿಗೆ ಹೋಗಬೇಕು ಅವರು ಎಂದು ರಾಜೂಗೌಡ ಡಿಕೆಶಿ ಹುಚ್ಚಾಸ್ಪತ್ರೆಗೇ ಹೋಗಬೇಕು ಎಂದು ವ್ಯಂಗ್ಯವಾಡಿದರು.