ಬೆಂಗಳೂರು : ರಾಜ್ಯಸಭೆ ಪ್ರವೇಶ ಮಾಡಲು ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ರಾಜ್ಯಸಭೆ ಚುನಾವಣೆ ದಿನಾಂಕ ನಿಗದಿಯಾದ ದಿನದಿಂದ ಕಾಂಗ್ರೆಸ್ ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆ ಎಂಬ ಕುತೂಹಲ ಮೂಡಿತ್ತು. ಅಲ್ಲದೆ ಒಂದು ಸ್ಥಾನಕ್ಕೆ ಕಾಂಗ್ರೆಸ್ ನ ಐದು ಹಿರಿಯ ನಾಯಕರು ಟಿಕೆಟ್ ಆಕಾಂಕ್ಷಿಗಳಾಗಿದ್ದರು.
ಮಲ್ಲಿಕಾರ್ಜುನ ಖರ್ಗೆ, ಎಂ. ವೀರಪ್ಪಮೊಹಿಲಿ, ಕೆ.ಎಚ್. ಮುನಿಯಪ್ಪ, ಮುದ್ದಹನುಮೇಗೌಡ, ಬಿ.ಕೆ. ಹರಿಪ್ರಸಾದ್, ರಾಜೀವ್ ಗೌಡ, ವಿ.ಎಸ್.ಉಗ್ರಪ್ಪ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಹಿರಿಯರನ್ನು ಹೇಗೆ ನಿಭಾಯಿಸುವುದು ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ತಲೆ ನೋವಾಗಿತ್ತು. ಹಾಗಾಗಿ ಟಿಕೆಟ್ ಫೈನಲ್ ಮಾಡುವ ಚೆಂಡನ್ನು ಪಕ್ಷದ ಹೈಕಮಾಂಡ್ ಅಂಗಳಕ್ಕೆ ತಳಿದ್ದರು.
ಇದೀಗ ಕಾಂಗ್ರೆಸ್ ಹೈಕಮಾಂಡ್ ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದ ಸ್ಪರ್ಧಿಸಲು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಕಾಶ ನೀಡಿದೆ. ಆದ್ದರಿಂದ ಯಾವುದೇ ತೊಂದರೆಗಳು ಇಲ್ಲದೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ಪ್ರವೇಶ ಮಾಡುತ್ತಾರೆ.








