ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಕೋವಿಡ್ ಸೋಂಕು ಪತ್ತೆ..

1 min read

 ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಕೋವಿಡ್ ಸೋಂಕು ಪತ್ತೆ..

ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ,  ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಖರ್ಗೆ ಅವರು ಅರೋಗ್ಯವಾಗಿದ್ದಾರೆ ಮನೆಯಲ್ಲಿ  ಐಸೋಲೇಟ್ ಆಗಿರುತ್ತಾರೆ  ಎಂದು ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಮಲ್ಲಿಕಾರ್ಜುನ್ ಖರ್ಗೆ ಅವರು ಸೋಂಕಿಗೆ ತುತ್ತಾಗುವ ಮುನ್ನ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ಕೋವಿಡ್ -19 ನಿರ್ಬಂಧಗಳನ್ನು ಉಲ್ಲಂಘಿಸಿದ್ದಕ್ಕಾಗಿ ಖರ್ಗೆ ಮತ್ತು ಕಾಂಗ್ರೆಸ್ ರಾಜ್ಯ ಪಕ್ಷದ ಘಟಕದ ಅಧ್ಯಕ್ಷ ಡಿಕೆ ಶಿವಕುಮಾರ್, ಕರ್ನಾಟಕ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮತ್ತು ವೀರಪ್ಪ ಮೊಯ್ಲಿ ಸೇರಿದಂತೆ ಇತರ ಹಿರಿಯ ಕಾಂಗ್ರೆಸ್ ನಾಯಕರ ವಿರುದ್ಧ  ಈ ಹಿಂದೆ ಎಫ್‌ಐಆರ್ ದಾಖಲಿಸಲಾಗಿತ್ತು.ಬುಧವಾರ ಸಂಜೆ, ಮತ್ತೊಬ್ಬ ಕಾಂಗ್ರೆಸ್ ನಾಯಕ  ವೀರಪ್ಪ ಮೊಯ್ಲಿ ಅವರಿಗೆ ಕೋವಿಡ್ -19  ದೃಢಪಟ್ಟಿದೆ.

ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ನಂತರ ಪಾದಯಾತ್ರೆಗೆ ನಿರ್ಬಂಧ ವಿಧಿಸಿದೆ.

ದೇಶ ವಿಭಜನೆಯ 74 ವರ್ಷಗಳ ನಂತರ  ಒಂದಾದ ಅಣ್ಣತಮ್ಮಂದಿರು..

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd