ನವದೆಹಲಿ : ಸಮಾಜವಾದಿ ಪಕ್ಷದ ಮಾಜಿ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಅಮರ್ ಸಿಂಗ್(64) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಕಳೆದ 7 ತಿಂಗಳಿಂದ ಸಿಂಗಾಪೂರ್ ನ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಮರ್ ಸಿಂಗ್ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೇ ಮುಲಾಯಂ ಸಿಂಗ್ ಯಾದವ್ ಅವರ ಆಪ್ತರಾಗಿದ್ದರು.