ಹಿರಿಯ ನಟಿ ಹೇಮಾ ಚೌಧರಿ(Hema Chaudhary), ಎಂ.ಎಸ್ ನರಸಿಂಹಮೂರ್ತಿ (M.S Narasimhamurthy) ಸೇರಿದಂತೆ ಹಲವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಯಿತು.
ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಹಿನ್ನೆಲೆ ಬೆಂಗಳೂರಿನ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹಲವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಿರಿಯ ನಟಿ ಹೇಮಾ ಚೌಧರಿ, ಎಂ.ಎಸ್ ನರಸಿಂಹಮೂರ್ತಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಪುರಸ್ಕೃತರಿಗೆ ಶಾಲು ಹೂವಿನ ಹಾರ ಹಾಕಿ, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಯಿತು.
ಹೇಮಾ ಚೌಧರಿ ಅವರು ತೆಲುಗಿನ ಸ್ಟಾರ್ ನಟ ಎನ್‌ಟಿ ರಾಮರಾವ್, ವರನಟ ರಾಜಕುಮಾರ್, ವಿಷ್ಣುವರ್ಧನ್, ಅನಂತ್ ನಾಗ್, ಶಂಕರ್ ನಾಗ್ ಸೇರಿದಂತೆ ಅನೇಕರೊಂದಿಗೆ ನಟಿಸಿದ್ದಾರೆ. 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿ ಬಣ್ಣ ಹಚ್ಚಿದ್ದಾರೆ. ಕಿರುತೆರೆಯಲ್ಲಿ ಜನಪ್ರಿಯ ಅಮೃತವರ್ಷಿಣಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
ನಟ, ಬರಹಗಾರರಾಗಿ ಗುರುತಿಸಿಕೊಂಡಿರುವ ಎಂ.ಎಸ್ ನರಸಿಂಹಮೂರ್ತಿ ಅವರು ಸಿಲ್ಲಿ ಲಲ್ಲಿ, ಪಾಪ ಪಾಂಡು ಧಾರಾವಾಹಿಗೆ 12 ಸಾವಿರ ಎಪಿಸೋಡ್ ಬರೆದಿದ್ದರು.