ಗದಗ: ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗ ಕ್ಷಣಗಣನೆ ಆರಂಭವಾಗಿದ್ದು, ಎಲ್ಲೆಡೆ ರಾಮನ ಜಪ ಆರಂಭವಾಗಿದೆ. ರಾಮನನ್ನು ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಈ ಮಧ್ಯೆ ಬಗೆ ಬಗೆಯಾಗಿ ತಮ್ಮ ತಮ್ಮ ಕೈ ಚಳಕದಲ್ಲಿ ಹಲವು ಕಲಾವಿದರು ರಾಮ ಹಾಗೂ ರಾಮ ಮಂದಿರ ನಿರ್ಮಿಸುತ್ತಿದ್ದಾರೆ.
ಜಿಲ್ಲೆಯ ಚಿಕ್ಕಹಂದಿಗೋಳ ಗ್ರಾಮದ ಯುವ ಕಲಾವಿದ ನಾಗರಾಜ ಕಮ್ಮಾರ 15 ಕೆಜಿ ಜೋಳ, 2 ಕೆಜಿ ಅಕ್ಕಿಯಲ್ಲಿ 12 ಅಡಿ ಎತ್ತರ, 10 ಅಡಿ ಅಗಲ ವಿಸ್ತೀರ್ಣದಲ್ಲಿ ಮನಮೋಹಕ ಶ್ರೀರಾಮಮಂದಿರ ನಿರ್ಮಿಸಿದ್ದಾರೆ.