ನವದೆಹಲಿ: ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಜನರು ಕುತೂಹಲದಿಂದ ಕಾಯುತ್ತಿದ್ದಾರೆ. ಎಲ್ಲೆಡೆ ಧಾರ್ಮಿಕ ಕಾರ್ಯಗಳು ಈಗಿನಿಂದಲೇ ನಡೆಯುತ್ತಿದ್ದು, ತಮಿಳುನಾಡು ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈಗಾಗಲೇ ಅಯೋಧ್ಯೆಯಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳ ನೇರ ಪ್ರಸಾರವನ್ನು ದೇಶದ ವಿವಿಧೆಡೆ ಆಯೋಜಿಸಲಾಗಿದೆ. ತಮಿಳುನಾಡು ಸರ್ಕಾರ ನೇರ ಪ್ರಸಾರವನ್ನು (live telecast) ನಿಷೇಧಿಸಿದೆ. ದೇವಸ್ಥಾನಗಳಲ್ಲಿ ರಾಮನ ಹೆಸರಲ್ಲಿ ವಿಶೇಷ ಪೂಜೆ, ಅನ್ನ ದಾನ ಸೇರಿದಂತೆ ಕಾರ್ಯಕ್ರಮ ನಡೆಸುವಂತಿಲ್ಲ. ತಮಿಳುನಾಡು ಸರ್ಕಾರದ (tamil nadu government) ಈ ಕ್ರಮವನ್ನು ಬಿಜೆಪಿ ನಾಯಕರು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾತನ ಧರ್ಮ ವಿರೋಧಿ ನಿಲುವು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ತಮಿಳುನಾಡು ಬಿಜೆಪಿ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನಲ್ಲಿ 200ಕ್ಕೂ ಹೆಚ್ಚು ರಾಮ ಮಂದಿರಗಳಿವೆ. ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯಿಂದ ನಿರ್ವಹಣೆ ಆಗುವ ದೇವಸ್ಥಾನಗಳಲ್ಲಿ ರಾಮನ ಹೆಸರಿನಲ್ಲಿ ಯಾವುದೇ ಪೂಜೆ, ಭಜನೆ, ಪ್ರಸಾದ ಹಂಚಿಕೆ, ಅನ್ನ ದಾನಕ್ಕೆ ಅವಕಾಶ ನೀಡಿಲ್ಲ. ಖಾಸಗಿಯಾಗಿಯೂ ಮಾಡುವಂತಿಲ್ಲ ಎನ್ನಲಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.