ವಾಷಿಂಗ್ಟನ್: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವು ಜ. 22ರಂದು ನಡೆಯಲಿದ್ದು, ರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ (Shri Ramalalla Pran-Pratishtha) ನಡೆಯಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಕೇವಲ ಭಾರತೀಯರು ಮಾತ್ರವಲ್ಲ, ಇಡೀ ವಿಶ್ವವೇ ಕಾಯುತ್ತಿದೆ.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ದೇಶ -ವಿದೇಶಗಳ ಗಣ್ಯರು ಬಾಗವಹಿಸಲಿದ್ದಾರೆ. ಹೀಗಾಗಿ ದೇಶದ ಪ್ರತಿಯೊಂದು ಮೂಲೆ ಮೂಲೆಯಲ್ಲಿಯೂ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈಗ ವಿದೇಶದಲ್ಲಿಯೂ ವ್ಯವಸ್ಥೆ ಮಾಡಲಾಗುತ್ತಿದೆ. ಅಮೆರಿಕ (USA) ಸಹ ನ್ಯೂಯಾರ್ಕ್ ನಗರದ ಐಕಾನಿಕ್ ಟೈಮ್ಸ್ ಸ್ಕ್ವೇರ್ನಲ್ಲಿ (Times Square) ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಿಕೊಂಡಿದೆ. ಅಲ್ಲದೇ, ಅಮೆರಿಕದಲ್ಲಿನ ಭಾರತೀಯ ರಾಯಭಾರಿ ಕಚೇರಿಗಳು ನೇರಪ್ರಸಾರ ಮಾಡಲು ಮುಂದಾಗಿವೆ.
ಪ್ರತಿಷ್ಠಾಪನೆಗೆ ಸಾಕ್ಷಿಯಾಗಲು 51 ದೇಶಗಳನ್ನು ಗುರುತಿಸಲಾಗಿದೆ. ಥೈಲ್ಯಾಂಡ್ ಕೂಡ ಈ ಪಟ್ಟಿಯಲಿದೆ. ಬ್ಯಾಂಕಾಕ್ನಲ್ಲಿ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಿಕೊಂಡಿದೆ. ಥೈಲ್ಯಾಂಡ್ನ ಹಲವಾರು ರಾಜರು ರಾಮನ ವಂಶಸ್ಥರ ಭಾಗವಾಗಿದ್ದಾರೆ ಎಂದೇ ಹೇಳಲಾಗುತ್ತದೆ. ಪ್ರತಿಯೊಬ್ಬ ರಾಜನಿಗೂ ಅವರ ಹೆಸರಿನಲ್ಲಿ ರಾಮನ ಬಿರುದು ಇರುವುದೇ ಇದಕ್ಕೆ ಸಾಕ್ಷಿ.








