ಲಕ್ನೋ : ಅಯೋಧ್ಯೆ ರಾಮಮಂದಿರ ಭೂಮಿ ಪೂಜೆಗೆ ಕ್ಷಣಗಣನೆ ಆರಂಭವಾಗಿದೆ. ಸದ್ಯ ರಾಮ ಜನ್ಮಭೂಮಿಯಲ್ಲಿ ಧಾರ್ಮಿಕ ವಿಧಿ, ವಿಧಾನ, ಗೌರಿ ಗಣೇಶ ಪೂಜೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಶಿಲಾನ್ಯಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿರುವ ಹಿನ್ನೆಲೆ ಹನುಮಾನ್ ದೇವಾಲಯದಲ್ಲಿ ಮೊದಲು ಸ್ಯಾನಿಟೈಸ್ ಮಾಡಲಾಗಿದೆ. ರಾಮಜನ್ಮಭೂಮಿ ಆವರಣದಲ್ಲಿ ಎಂಟು ಮಂದಿ ಪುರೋಹಿತರು ಭೂಮಿ ಪೂಜೆ ನೆರವೇರಿಸಲಿದ್ದಾರೆ. ಪ್ರಧಾನಿಗಳು 9.30ಕ್ಕೆ ವಿಶೇಷ ವಿಮಾನದಲ್ಲಿ ಲಕ್ನೋಗೆ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಅಯೋಧ್ಯೆಗೆ ತೆರಳಲಿದ್ದಾರೆ ಎಂದು ವರದಿ ವಿವರಿಸಿದೆ.
ನಂತರ ಪ್ರಧಾನಿ ಅವರು ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ನಂತರ ರಾಮಮಂದಿರ ಭೂಮಿ ಪೂಜೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ.








