ಕೊಪ್ಪಳ: ಅಯೋಧ್ಯೆಯಲ್ಲಿ (Ayodhya) ರಾಮಲಲ್ಲಾ (Ramlalla) ಮೂರ್ತಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಯುತ್ತಿದ್ದು, ಇನ್ನೊಂದೆಡೆ ರಾಮನ ಭಂಟನ ಸ್ಥಾನದಲ್ಲಿಯೂ ಸಕಲ ಸಿದ್ಧತೆ ನಡೆಯುತ್ತಿದೆ.
ಹನುಮ ಜನ್ಮಸ್ಥಳ ಅಂಜನಾದ್ರಿ (Anjanadri) ಬೆಟ್ಟದ ಕೆಳಗೆ 500 ಕೆಜಿ ತೂಕವಿರುವ, 9 ಅಡಿ ಎತ್ತರದ ಪಂಚಲೋಹದ ಶ್ರೀರಾಮನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ. ಜ. 22ರಂದು ಈ ಕಾರ್ಯಕ್ರಮ ನಡೆಯಲಿದ್ದು, ಬೆಂಗಳೂರಿನ ಖಾಸಗಿ ಸಂಸ್ಥೆಯವರು ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ಈ ಮೂರ್ತಿ ತಯಾರಿಸಿದ್ದಾರೆ ಎನ್ನಲಾಗಿದೆ.