ರಾಯಚೂರಿನಲ್ಲಿ ಸಂಭ್ರಮದ ರಂಜಾನ್ ಆಚರಣೆ
ರಾಯಚೂರು: ರಂಜಾನ್ ಹಬ್ಬದ ಹಿನ್ನಲೆಯಲ್ಲಿ ರಾಯಚೂರು ನಗರದಲ್ಲಿ ಪರಸ್ಪರ ಶುಭಾಶಯ ಕೋರಿ ಮುಸ್ಲಿಂ ಬಾಂಧವರು ಹಬ್ಬವನ್ನು ಆಚರಿಸಿದರು.
ನಗರದ ಈದ್ಗಾ ಮೈದಾನದಲ್ಲಿ ಸಾವಿರಾರು ಜನ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೊರೊನಾ ಕಠಿಣ ನಿಯಮಗಳ ತೆರವಿನ ಬಳಿಕ ಇದೇ ಮೊದಲ ಬಾರಿಗೆ ಹೆಚ್ಚು ಸಂಖ್ಯೆಯಲ್ಲಿ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.
ಇನ್ನೂ ಸಾಮೂಹಿಕ ಪ್ರಾರ್ಥನಾ ಕಾರ್ಯಕ್ರಮದಲ್ಲಿ ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್, ಮಾಜಿ ಶಾಸಕ ಸೈಯದ್ ಯಾಸಿನ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿ ಶುಭಾಶಯ ಕೋರಿದರು.
ರಾಯಚೂರು ನಗರ ಮಾತ್ರವಲ್ಲದೆ ಸಿಂಧನೂರು, ದೇವದುರ್ಗ, ಲಿಂಗಸುಗೂರು ಸೇರಿದಂತೆ ಜಿಲ್ಲೆಯ ಎಲ್ಲೆಡೆ ಈದ್ ಉಲ್ ಫಿತರ್‌ನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.