Ramadas
ಮೈಸೂರು: ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ದಿನಗಳಿಂದ ಮೈಸೂರು ದಸರಾ ಕಾರ್ಯಕ್ರಗಳಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದ ಕೆ.ಆರ್.ಕ್ಷೇತ್ರದ ಶಾಸಕ ರಾಮದಾಸ್ ಇದೀಗ ಅನಾರೋಗ್ಯಕ್ಕೀಡಾಗಿದ್ದು, ಅವರಿಗೆ ಉಸಿರಾಟದ ಸಮಸ್ಯೆಯುಂಟಾಗಿದೆ.
ಡಿಸಿಎಂ ಗೋವಿಂದ ಕಾರಜೋಳ ಕುಟುಂಬದ ಒಟ್ಟು 8 ಮಂದಿಗೆ ಕೊರೊನಾ ಪಾಸಿಟಿವ್
ಈ ಹಿನ್ನೆಲೆಯಲ್ಲಿ ರಾಮದಾಸ್ ಅವರು ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಮದಾಸ್ ಅವರಿಗೆ ಕೊವಿಡ್ ಸೇರಿದಂತೆ ಹಲವು ಟೆಸ್ಟ್ ಗಳನ್ನು ಮಾಡಲಾಗುತ್ತಿದೆ. ರಾಮದಾಸ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆ ಬೆಂಬಲಿಗರು ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಸೀಘ್ರವೇ ಗುಣಮುಖರಾಗುವಂತೆ ಪ್ರಾರ್ಥಿಸುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
Ramadas








