ರಾಮನಗರದಲ್ಲಿ ಕಾಂಗ್ರೆಸ್ ಪ್ರಾಬಲ್ಯ : ಸೊನ್ನೆ ಸುತ್ತಿದ ಬಿಜೆಪಿ
ರಾಮನಗರ : ಭಾರಿ ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದ್ದ ರಾಮನಗರ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮುಖ್ಯವಾಗಿ ಡಿಸಿಎಂ ಅಶ್ವಥ್ ನಾರಾಯಣ್ ಉಸ್ತುವಾರಿ ಆಗಿರುವ ರಾಮನಗರದಲ್ಲಿ ಬಿಜೆಪಿ ಖಾತೆ ತೆರೆಯದೆ ಭಾರಿ ಮುಖಭಂಗ ಅನುಭವಿಸಿದೆ.
ರಾಮನಗರ ನಗರಸಭೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಒಟ್ಟು 31 ವಾರ್ಡ್ ಗಳ ಪೈಕಿ ಕಾಂಗ್ರೆಸ್ 19 ಹಾಗೂ ಜೆಡಿಎಸ್ 11 ವಾರ್ಡ್ ನಲ್ಲಿ ಗೆಲುವು ಸಾಧಿಸಿದೆ. ಒಂದು ವಾರ್ಡ್ ನಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ.
ಅಂದಹಾಗೆ ಕೊರೊನಾ ಸಂಕಷ್ಟದ ನಡುವೆಯೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅಶ್ವತ್ಥ ನಾರಾಯಣ ಎಲೆಕ್ಷನ್ ಗೆ ಅಬ್ಬರದ ಪ್ರಚಾರ ನಡೆಸಿದ್ದರು. 20 ವಾರ್ಡ್ ಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಅಂತಾ ಹೇಳಿದ್ದರು. ಆದರೆ 1 ವಾರ್ಡ್ ನಲ್ಲೂ ಗೆದ್ದಿಲ್ಲ.








