Ramalingareddy – ತನಿಖಾ ಸಂಸ್ಥೆಗಳಿಗೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರಗಳು ಕಾಣಿಸಲ್ವಾ
ಬೆಂಗಳೂರು : ವಿರೋಧ ಪಕ್ಷಗಳ ಮೇಲೆ ಮುಗಿಬೀಳುವ ಇಡಿ, ಸಿಬಿಐ, ಆದಾಯ ತೆರಿಗೆಯಂತಹಾ ತನಿಖಾ ಸಂಸ್ಥೆಗಳಿಗೆ ಬಿಜೆಪಿ ಸರ್ಕಾರದ ಇಂತಹ ಭ್ರಷ್ಟಾಚಾರಗಳು ಕಾಣಿಸುವುದೇ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.
ಇನ್ಸ್ಪೆಕ್ಟರ್ ನಂದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿರುವ ರಾಮಲಿಂಗಾರೆಡ್ಡಿ, ರಾಜ್ಯ ಸರ್ಕಾರದ ವ್ಯಾಪ್ತಿಯ ಸಂಸ್ಥೆಗಳಿಂದ ತನಿಖೆಯಾದರೆ ಸತ್ಯಾಂಶ ಹೊರ ಬರುವುದಿಲ್ಲ.
ಇಂತಹ ಪ್ರಕರಣಗಳಲ್ಲಿ ನ್ಯಾಯ ಸಿಗಬೇಕಾದರೆ ನ್ಯಾಯಾಂಗ ತನಿಖೆ ಆಗಬೇಕು. ಆಗ ಮಾತ್ರ ಸತ್ಯಾಂಶ ಬೆಳಕಿಗೆ ಬರುತ್ತದೆ ಎಂದು ಒತ್ತಾಯಿಸಿದ್ದಾರೆ.

ಅಲ್ಲದೆ ನಂದೀಶ್ ಅವರಿಂದ ಯಾರೇ ಹಣ ಪಡೆದಿದ್ದರೂ ಈ ಸಮಯದಲ್ಲಿ ಅವರು ಹಿಂದಿರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಇನ್ಸ್ಪೆಕ್ಟರ್ ನಂದೀಶ್ ಅವರು ಲಕ್ಷಾಂತರ ಹಣ ನೀಡಿದ ಒತ್ತಡದಿಂದ ಹೃದಯಾಘಾತಕ್ಕೆ ಒಳಗಾಗಿದ್ದಾರೆ.
ಹೀಗಾಗಿ ಈ ಪೊಲೀಸ್ ಅಧಿಕಾರಿಯ ಸಾವಿಗೆ ಸರ್ಕಾರವೇ ಹೊಣೆ ಎಂದು ಆರೋಪಿಸಿರುವ ರಾಮಲಿಂಗಾರೆಡ್ಡಿ, ವಿರೋಧ ಪಕ್ಷಗಳ ಮೇಲೆ ಮುಗಿಬೀಳುವ ಇಡಿ, ಸಿಬಿಐ, ಆದಾಯ ತೆರಿಗೆಯಂತಹಾ ತನಿಖಾ ಸಂಸ್ಥೆಗಳಿಗೆ ಬಿಜೆಪಿ ಸರ್ಕಾರದ ಇಂತಹ ಭ್ರಷ್ಟಾಚಾರಗಳು ಕಾಣಿಸುವುದೇ ಇಲ್ಲ ಎಂದು ಪ್ರಶ್ನಿಸಿದ್ದಾರೆ.