ರಾಮಮೂರ್ತಿನಗರ ಗ್ಯಾಂಗ್ ರೇಪ್ ಕೇಸ್ – ಆರೋಪಿಗಳ ಮೇಲೆ ಫೈರಿಂಗ್ – ಯುವತಿ ಪತ್ತೆಗೆ ವಿಶೇಷ ತಂಡ ರಚನೆ
ರಾಮಮೂರ್ತಿನಗರ ಗ್ಯಾಂಗ್ ರೇಪ್ ಕೇಸ್ ಸಂಬಂಧ ಸಂತ್ರಸ್ತೆ ಮತ್ತು ಆರೋಪಿಗಳು ವಾಸವಿದ್ದ ಮನೆ ಮಹಜರ್ ಮಾಡಲಾಗಿದೆ. ಸ್ಥಳಕ್ಕೆ ಎಫ್ ಎಸ್ ಎಲ್ ತಜ್ಞರು ಭೇಟಿ ನೀಡಿ ಕೆಲ ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ. ದೌರ್ಜನ್ಯವೆಸಗಿರುವ ವೈರಲ್ ವಿಡಿಯೋದ ಘಟನೆ ನಡೆದಿರುವುದು ಇಲ್ಲಿಯದ್ದ ಅಥವಾ ಬೇರೆಡೆ ಮಾಡಿರುವುದು ಎಂಬ ಬಗ್ಗೆ ತನಿಖೆ ನಡೆಸಲಾಗ್ತಿದೆ.
ಸದ್ಯ 2ವಿಶೇಷ ತಂಡ ರಚನೆ ಮಾಡಿ ತನಿಖೆ ಕೈಗೊಳ್ಳಲಾಗಿದೆ. ಇನ್ನೂ ಆರೋಪಿಗಳಿಗೆ ಯುವತಿಯರು ಸಾಥ್ ನೀಡಿದ್ದರು ಎನ್ನಲಾಗಿದ್ದು, ಇಬ್ಬರು ಯುವತಿಯರು ಸೇರಿದಂತೆ 6ಜನರನ್ನು ವಶಕ್ಕೆ ಪಡೆದಿರುವ ರಾಮಮೂರ್ತಿನಗರ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ಅಲ್ಲದೇ ರೇಪ್ ಕೇಸ್ ಆರೋಪಿಗಳ ಕಾಲಿಗೆ ಗುಂಡೇಟು ಸಹ ಬಿದ್ದಿದೆ. ಸ್ಥಳ ಮಹಜರು ಪರಿಶೀಲನೆಗೆ ಹೋದಾಗ ಪೊಲೀಸರು ಇಬ್ಬರ ಕಾಲಿಗೆ 1ಸುತ್ತಿನ ಗುಂಡು ಹಾರಿಸಿದ್ದಾರೆ. ಆತ್ಮರಕ್ಷಣೆಗಾಗಿ ಇಬ್ಬರ ಕಾಲಿಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ನಿನ್ನೆ ಘಟನೆ ಸಂಬಂಧ ಎಸಿಪಿ ಸಖ್ರಿ,ಇನ್ಸ್ಪೆಕ್ಟರ್ ಮೆಲ್ವಿನ್ ಆರೋಪಿಗಳನ್ನ ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಈ ವೇಳೆ ಎಸಿಪಿ ಸಖ್ರಿ, ಪೇದೆಯೊಬ್ಬರಿಗೆ ಗಾಯವಾಗಿದೆ. ಕೃತ್ಯ ನಡೆದ ಸ್ಥಳ ಪರಿಶೀಲನೆ ನಡೆಸಲು ಬಂದಾಗ ಘಟನೆ ನಡೆದಿದೆ. ಹೀಗಾಗಿ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ರಾ
ಮಮೂರ್ತಿನಗರ ಇನ್ಸ್ಪೆಕ್ಟರ್ ಮೆಲ್ವಿನ್ ಸಬ್ ಇನ್ಸ್ಪೆಕ್ಟರ್ ಅರವಿಂದ್ ಅವರು ಗುಂಡುಹಾರಿಸಿದ್ದಾರೆ. ಆರೋಪಿ ಹೃದಯ್ ಬಾಬುಗೆ ಬಲಗಾಲಿಗೆ. ಸಾಗರ್ ಗೆ ಎಡಗಾಲಿಗೆ ಗುಂಡು ಹಾರಿಸಲಾಗಿದೆ ಎಂದು ಪೂರ್ವ ವಿಭಾಗ ಡಿಸಿಪಿ ಡಾ. ಶರಣಪ್ಪ ಹೇಳಿದ್ದಾರೆ.
ಇಂದು ಬೆಳಗ್ಗೆ 6.30 ರಲ್ಲಿ ಈ ಘಟನೆ ನಡೆದಿದೆ. ಗಾಯಾಳು ಆರೋಪಿಗಳನ್ನ ಸರ್ಕಾರಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವತಿ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ. ಆರೋಪಿಗಳ ಹಿನ್ನೆಲೆ, ಕೆಲಸ ಕಾರ್ಯಗಳ ಬಗ್ಗೆ ತನಿಖೆ ನಡೆಯುತ್ತಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.






