Ramanagara – ಚಲಿಸುತ್ತಿದ್ದ ಒಮಿನಿ ಕಾರಿನ ಮೇಲೆ ಮರ ಬಿದ್ದು ಇಬ್ಬರ ಸಾವು
ಚಲಿಸುತ್ತಿದ್ದ ಮಾರುತಿ ಒಮಿನಿ ಕಾರಿನ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ರಾಮನಗರದ ಕುಂಭಾಪುರಾ ಗೆಟ್ ಬಳಿ ನಡೆದಿದೆ. ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಮುಂಜಾನೆ ರಾಮನಗರದ ಕಡೆಯಿಂದ ಬೆಂಗಳೂರಿಗೆ ಬರುತ್ತಿರುವಾಗ ಕುಂಭಾಪುರಾ ಗೇಟ್ ಬಳಿ ಒಮಿನಿ ಕಾರಿನ ಮೇಲೆ ಮರ ಉರುಳಿ ಬಿದ್ದಿದ್ದು 49 ವರ್ಷದ ಸುಂದ್ರೇಶ್ ಮತ್ತು 9 ವರ್ಷದ ಮಗಳು ತನ್ಮಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಹೆಂಡತಿ ಮತ್ತು ಮತ್ತಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಅಪಘಾತದಿಂದಾಗಿ ಮೈಸೂರು – ಬೆಂಗಳೂರು ಹೆದ್ದಾರಿಯ ನಡುವೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಗ್ನಿ ಶಾಮಕ ಸಿಬ್ಬಂದಿ ಮತ್ತು ಪೊಲೀಸರು ಕಾರು ಮತ್ತು ಮರವನ್ನ ತೆರವುಗೊಳಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮಂಡ್ಯ ಜಿಲ್ಲೆಯ ಮಳವಳ್ಳಿಯ ಬಳಿಯ ಅಗಸನಪುರಕ್ಕೆ ಹಬ್ಬಕ್ಕೆಂದು ಹೋಗಿದ್ದರು. ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಹೋಗುವಾಗ ರಾಮನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.