ನಟಿ ರಂಭಾ ಕಾರು ಕೆನಡಾದಲ್ಲಿ ಅಪಘಾತ – ಮಗಳು ಆಸ್ಪತ್ರೆಗೆ ದಾಖಲು…
ತೆಲುಗು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರು ನಟಿ ರಂಭಾ ಕಾರು ಕೆನಡಾದಲ್ಲಿ ಅಪಘಾತಕ್ಕೀಡಾಗಿದೆ. ಮಕ್ಕಳು ಮತ್ತು ದಾದಿ ಅವರೊಂದಿಗೆ ಕಾರಿನಲ್ಲಿದ್ದಾಗ ಅಫಘಾತ ಸಂಭವಿಸಿದೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.
ಈ ಕುರಿತು ನಟಿ ರಂಭಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಬರುವಾಗ ನಮ್ಮ ಕಾರಿಗೆ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ’ ನಾನು ಮತ್ತು ದಾದಿ ಕಾರಿನಲ್ಲಿ ಮಕ್ಕಳೊಂದಿಗೆ ಇದ್ದೆವು. ಈ ಅಪಘಾತದಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ, ಆದರೆ ಅವರ ಮಗಳು ಸಶಾ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಗಳಿಗಾಗಿ ಪ್ರಾರ್ಥಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಈ ಫೋಟೋಗಳನ್ನು ಹಂಚಿಕೊಂಡಿರುವ ರಂಭಾ ಸಣ್ಣಪುಟ್ಟ ಗಾಯಗಳಾಗಿವೆ, ಆದರೆ ನಾವೆಲ್ಲರೂ ಸುರಕ್ಷಿತವಾಗಿದ್ದೇವೆ. ಆದರೆ ನನ್ನ ಮಗಳು ಸಶಾ ಇನ್ನೂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ದಯವಿಟ್ಟು ನಮಗಾಗಿ ಪ್ರಾರ್ಥಿಸಿ ಎಂದು ಕೇಳಿಕೊಂಡಿದ್ದಾರೆ.
ರಂಭಾ ಕಾರು ಅಪಘಾತದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕಾರು ನಜ್ಜುಗುಜ್ಜಾಗಿದ್ದು ಮಗಳು ಸಶಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಂಭಾ ಹೆಸರಾಂತ ನಟಿಯಾಗಿದ್ದು, ತೆಲುಗು ತಮಿಳು, ಕನ್ನಡ, ಹಿಂದಿ, ಮಲಯಾಳಂ, ಸೇರಿದಂತ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ರಂಭಾ ಅವರ ನಿಜವಾದ ಹೆಸರು ವಿಜಯಲಕ್ಷ್ಮಿ. ಎರಡು ದಶಕಗಳಲ್ಲಿ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲೂ ರವಿಚಂದ್ರನ್ ಜೊತೆ ನಟಿಸಿದ್ದಾರೆ.
Rambha and her children injured in car accident in Canada