ಬೆಂಗಳೂರು: ಜೆಡಿಎಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ರುಜುವಾಗಿದೆ. ಇದಕ್ಕೆ ಸಾಕ್ಷಿಯೆಂಬಂತೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು ಅವರು ಪಕ್ಷ ತೊರೆದಿದ್ದಾರೆ. ಪಕ್ಷದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದರೂ ಒಂದು ಪೂರ್ಣ ಅವಧಿಗೆ ವಿಧಾನಪರಿಷತ್ತಿನ ಸದಸ್ಯನಾಗಿ ಕಾರ್ಯನಿರ್ವಹಿಸುವ ಅವಕಾಶ ದೊರೆಯಲಿಲ್ಲ ಮತ್ತು ಇತರ ಕಾರಣಗಳಿಂದ ರಾಜೀನಾಮೆ ನೀಡುತ್ತಿರುವುದಾಗಿ ರಮೇಶ್ ಬಾಬು ಅವರು ಬಿಡುಗಡೆ ಮಾಡಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಆಗ್ನೇಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಪ್ರವೇಶ ಬಯಸಿದ್ದ ರಮೇಶ್ ಬಾಬುಗೆ ಜೆಡಿಎಸ್ ಟಿಕೆಟ್ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಅವರು ಪಕ್ಷದ ವರಿಷ್ಠ ಹೆಚ್.ಡಿ ದೇವೆಗೌಡರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಬಿಜೆಪಿಯಲ್ಲಿ ಬಿರುಕು: ಅತೃಪ್ತ ನಾಯಕರ ‘ಬಣ’ ಕದನ
ಕರ್ನಾಟಕದ ಬಿಜೆಪಿ ಘಟಕದಲ್ಲಿ ಬಣ ರಾಜಕೀಯ ಮತ್ತೆ ಮುಂದುವರೆದಿದೆ. ಪಕ್ಷದೊಳಗಿನ ಅತೃಪ್ತ ನಾಯಕರು ಮಾಜಿ ಸಚಿವ ಕುಮಾರ್ ಬಂಗಾರಪ್ಪನವರ ನಿವಾಸದಲ್ಲಿ ಸಭೆ ಸೇರಿದ್ದು, ಈ ಸಭೆ ಹಲವು...