ದೂರು ವಾಪಸ್ಸಿಗೆ ನಿರ್ಧರಿಸಿದ ದಿನೇಶ್ ಕಲ್ಲಹಳ್ಳಿ ಪತ್ರದಲ್ಲಿ ಏನಿದೆ?
1 min read
ದೂರು ವಾಪಸ್ಸಿಗೆ ನಿರ್ಧರಿಸಿದ ದಿನೇಶ್ ಕಲ್ಲಹಳ್ಳಿ ಪತ್ರದಲ್ಲಿ ಏನಿದೆ?
ಬೆಂಗಳೂರು : : ಬೆಳಗಾವಿ ಸಾಹುಕಾರ್ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನ ಹಿಂಪಡೆದುಕೊಂಡಿದ್ದಾರೆ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದೂರು ನೀಡಿದವರು 5 ಕೋಟಿಗೆ ಡೀಲ್ ಆಗಿದ್ದಾರೆ ಎಂದಿದ್ದರು. ಈ ಹೇಳಿಕೆ ನನಗೆ ಬೇಸರ ತಂದಿದೆ. ನನಗೆ ಸಿಕ್ಕ ಮಾಹಿತಿ ಆಧರಿಸಿ ನಾನು ದೂರು ಕೊಟ್ಟಿದ್ದೇನೆ. ತನಿಖೆ ಮಾಡಿ ಅಂತ ನಾನು ಹೇಳಿದ್ದೆ. ಅದನ್ನು ಬಿಟ್ಟು ಇನ್ನೇನು ಮಾಡಿ ಅಂತ ಹೇಳಿದ್ದೆ. ಇಂಥ ಸಂದರ್ಭದಲ್ಲಿ ಕುಮಾರಣ್ಣನ ಹೇಳಿಕೆಯಿಂದ ನನ್ನ ಮನಸ್ಸಿಗೆ ಆಘಾತವಾಗಿದೆ ಎಂದು ದಿನೇಶ್ ಕಲ್ಲಹಳ್ಳಿ ಹೇಳಿಕೆ ನೀಡಿದ್ದಾರೆ.
ದೂರು ವಾಪಸ್ಸಿಗೆ ನಿರ್ಧರಿಸಿದ ದಿನೇಶ್ ಕಲ್ಲಹಳ್ಳಿ ಪತ್ರದಲ್ಲಿ ಏನಿದೆ?
ಮಾಜಿ ನೀರಾವರಿ ಮಂತ್ರಿ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನಿಡಿದ್ದು ಸರಿಯಷ್ಟೇ. ಬಟ್ಟೆಯ ಮೇಲೆ ಮುಳ್ಳು ಬಿದ್ದರೂ ಮುಳ್ಳಿನ ಮೇಲೆ ಬಟ್ಟೆ ಬಿದ್ದರೂ ಹರಿಯುವುದು ಬಟ್ಟೆಯ ಎಂಬ ನಾಣ್ಣುಡಿಯನ್ನು ಈ ಹಿಂದೆ ಮಹಿಳೆಯರ ವಿಷಯದಲ್ಲಿ ಬಳಕೆ ಮಾಡಲಾಗುತ್ತಿತ್ತು. ದುರಾದೃಷ್ಟವಶಾತ್ ಈಗಿನ ಸುಸಂಸ್ಕøತ ನಾಗರಿಕ ಸಮಾಜದಲ್ಲಿ ಮಹಿಳೆಯರ ವಿಚಾರದಲ್ಲಿ ಈ ನಾಣ್ಣುಡಿಯಂತೆ ನಡೆಯುತ್ತಿದೆ. ಸಚಿವರದ್ದೆನ್ನಲಾದ ಲೈಂಗಿಕ ದೌರ್ಜನ್ಯ ಸಿಡಿಯನ್ನು ಪೊಲೀಸರಿಗೆ ದೂರಿನ ಜೊತೆಗೆ ಒಪ್ಪಿಸಿದ್ದೆ. ಆದರೆ ಈಗ ಇಡೀ ಸಮಾಜದಲ್ಲಿ ಮಹಿಳೆಯ ಚಾರಿತ್ಯ ಹರಣ ನಡೆಯುತ್ತಿದೆ ಎಂದು ಪತ್ರದಲ್ಲಿ ದಿನೇಶ್ ಕಲ್ಲಹಳ್ಳಿ ಉಲ್ಲೇಖಿಸಿದ್ದಾರೆ.