ಬೆಳಗಾವಿ: ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕೆಂಬ ಚರ್ಚೆಗಳು ನಡೆಯುತ್ತಿದ್ದು, ಈ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ಅವರಿಗೆ ಮನವರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಲದೆ ದೆಹಲಿಯ ತಬ್ಲಿಘಿ ಧಾರ್ಮಿಕ ಸಭೆಗೆ ಹೋಗಿಬಂದಿರುವವರು ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಹೋಗುವುದು ರೂಢಿ. ಆದ್ದರಿಂದ ಅಂತಹವರನ್ನು ಪತ್ತೆಹಚ್ಚುವ ಕೆಲಸ ತುರ್ತಾಗಿ ನಡೆಸಬೇಕು. ಇಲ್ಲದಿದ್ದರೆ ಸೋಂಕು ಇನ್ನಷ್ಟು ಹರಡುತ್ತದೆ. ಯಾವುದೇ ಕಾರಣಕ್ಕೂ ಇಂತಹ ಸ್ಥಿತಿ ಉದ್ಭವಿಸಬಾರದು ಎಂದರು.
ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್
ತುಮಕೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಹೊಸ ಪಿಂಚಣಿ ಪದ್ಧತಿಯನ್ನು (NPS) ರದ್ದುಗೊಳಿಸಿ, ಹಳೇ ಪಿಂಚಣಿ...








