ಸುದ್ದಿಗೋಷ್ಠಿಯಲ್ಲಿ `ಸಾಹುಕಾರ್ ರಾಜಕೀಯ ವೈರಾಗ್ಯದ ಮಾತು’
ಬೆಂಗಳೂರು : ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ, ಕುಟುಂಬಕ್ಕೆ ನನ್ನ ಮೊದಲ ಪ್ರಾಶಸ್ತ್ಯ ಎಂದು ರಮೇಶ್ ಜಾರಕಿಹೊಳಿ ರಾಜಕೀಯ ವೈರಾಗ್ಯದ ಮಾತುಗಳನ್ನಾಗಿಡಿದ್ದಾರೆ.
ಸಿಡಿ ಪ್ರಕರಣದಲ್ಲಿ ದಿನೇಶ್ ಕಲ್ಲಹಳ್ಳಿ ಟ್ವಿಸ್ಟ್ ನೀಡಿ ದೂರು ವಾಪಸ್ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ದಿಢೀರ್ ಸುದ್ದಿಗೋಷ್ಠಿ ನಡೆಸಿದ ರಮೇಶ್ ಜಾರಕಿಹೊಳಿ, ಮೊದಲಿಗೆ ತಮಗೆ ನೈತಿಕವಾಗಿ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಬಳಿಕ ಸಿಡಿ ವಿಚಾರವಾಗಿ ಮಾತನಾಡುತ್ತಾ, ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ನನಗೆ ಕುಟುಂಬ ಮುಖ್ಯ ಎಂದು ಹೇಳುವ ಮೂಲಕ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ.
ರಾಜಕೀಯ, ಮಂತ್ರಿ ಸ್ಥಾನ ಸಿಗುತ್ತೋ ಇಲ್ಲ ಅನ್ನೋದು ಬೇರೆ ಮಾತು. ನಮ್ಮದು ದೊಡ್ಡ ಮನೆತನ, ನನಗೆ ಕುಟುಂಬ ಮುಖ್ಯ. ವೀಡಿಯೋ ರಿಲೀಸ್ ಬಳಿಕ ಮರುದಿನ ಬೆಳಗ್ಗೆ 9.30ಕ್ಕೆ ನಾನೇ ರಾಜೀನಾಮೆ ನೀಡಿದ್ದೇನೆ. ನನಗೆ ಯಾವುದೇ ಹೆದರಿಕೆ ಇಲ್ಲ. ನಾನು ಅಪರಾಧಿಯಲ್ಲ, ನಿರಪರಾದಿ. ಹೆಚ್.ಡಿ.ಕುಮಾರಸ್ವಾಮಿ, ರೇವಣ್ಣ ನನಗೆ ನೈತಿಕ ಬೆಂಬಲ ನೀಡಿದ್ದಾರೆ. ನನ್ನ ರಾಜಕೀಯ ಜೀವನ ಅಂತ್ಯಗೊಳಿಸಲು ಸಂಚು ರೂಪಿಸಲಾಗಿದೆ. ಈ ವಿಷಯದಲ್ಲಿ ಸೋದರ ಬಾಲಚಂದ್ರ ಜಾರಕಿಹೊಳಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದ್ರು.
ಇದೇ ವೇಳೆ ಸಿಡಿ ಹಿಂದೆ ಇರುವ ಇಬ್ಬರ ನಾಯಕರಿದ್ದಾರೆ. ಸಮಯ ಬಂದಾಗ ಅವರಿಬ್ಬರ ಹೆಸರನ್ನ ಬಹಿರಂಗಗೊಳಿಸುತ್ತದೆ. ಸಿಡಿ ಷಡ್ಯಂತ್ರ ಹಿಂದಿರುವವರನ್ನು ಜೈಲಿಗೆ ಕಳುಹಿಸುತ್ತೇನೆ. ಈ ಸಂಬಂಧ ಕಾನೂನು ಹೋರಾಟ ನಡೆಸುತ್ತೇನೆ. ಎಷ್ಟೇ ಖರ್ಚು ಆಗಲಿ, ಅವರನ್ನ ಜೈಲಿಗೆ ಕಳುಹಿಸುತ್ತೇನೆ ಎಂದು ರಮೇಶ್ ಜಾರಕಿಹೊಳಿ ವಿರೋಧಿಗಳಿಗೆ ಚಾಲೆಂಜ್ ಹಾಕಿದ್ದಾರೆ.