ಬೈ ಎಲೆಕ್ಷನ್ : ಒಂದಾಗಿ ಮತಬೇಟೆಗಿಳಿದ ಜಾರಕಿಹೊಳಿ – ಹೆಬ್ಬಾಳ್ಕರ್ RAMESH JARKIHOLI
ಬೆಳಗಾವಿ : ಏಪ್ರಿಲ್ 17 ರಂದು ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಟ್ಟಾಗಿ ಮತಬೇಟೆಗಿಳಿದಿದ್ದಾರೆ.
ಉಪಚುನಾವಣಾ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಆಗಮಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸತೀಶ್ ಜಾರಕಿಹೊಳಿ ಜೊತೆಗೆ ಕೆಲ ಹೊತ್ತು ಮಾತುಕತೆ ನಡೆಸಿದರು.
ಬಳಿಕ ಗ್ರಾಮೀಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲು ಒಂದೇ ಕಾರಿನಲ್ಲಿ ಜಾರಕಿಹೊಳಿ ಮತ್ತು ಹೆಬ್ಬಾಳ್ಕರ್ ತೆರಳಿ ಕೆಲ ಸಮುದಾಯದವರ ಮುಖಂಡರ ಜೊತೆ ಮಾತುಕತೆ ನಡೆಸಿದರು.
ಅಂದಹಾಗೆ ಕಳೆದ ಪಿಎಲ್ ಡಿ ಬ್ಯಾಂಕ್ ಚುನಾವಣೆ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ನಡುವೆ ವೈಮನಸ್ಸು ಉಂಟಾಗಿತ್ತು.
ಅಂದಿನಿಂದ ಉಭಯರೂ ಅಂತರ ಕಾಯ್ದುಕೊಂಡಿದ್ದರು. ಇದೀಗ ಒಟ್ಟಿಗೆ ಕಾಣಿಸಿಕೊಂಡು ಚುನಾವಣಾ ಕಾರ್ಯಗಳಲ್ಲಿ ತೊಡಗಿರುವುದು ಅಚ್ಚರಿಗೆ ಕಾರಣವಾಗಿದೆ.