ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಕೇಳಿದ ಪ್ರಶ್ನೆಗೆ `ಥೂ ಥೂ ಎಂದ ಸಾಹುಕಾರ್’ ramesh-jarkiholi saaksha tv
ಬೆಳಗಾವಿ : ಕಂದಾನಗರಿಯಲ್ಲಿ ಪರಿಷತ್ ಚುನಾವಣಾ ಕಾವು ರಂಗೇರಿದೆ.
ಬಿಜೆಪಿ-ಕಾಂಗ್ರೆಸ್ ಮಧ್ಯೆ ನೇರ ಪೈಪೋಟಿ ಏರ್ಪಟ್ಟಿದೆ.
ಈ ಮಧ್ಯೆ ಕಾಂಗ್ರೆಸ್ ಪಕ್ಷವನ್ನು ಸೋಲಿಸೋದೇ ನಮ್ಮ ಗುರಿ ಎಂದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಕೇಳಿದ ಪ್ರಶ್ನೆಗೆ ಥೂ ಥೂ ಎಂದು ಗೇಲಿ ಮಾಡಿದ್ದಾರೆ.
ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಪರ ನಾಮಪತ್ರ ಸಲ್ಲಿಸಲಿದ್ದೇವೆ.
ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡುತ್ತಿದ್ದೇವೆ.
ನಾವು ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಬೇಕಿದೆ ಎಂದು ಕರೆಕೊಟ್ಟರು.
ಅಂದಹಾಗೆ ಬೆಳಗಾವಿಯಲ್ಲಿ ಪರಿಷತ್ ಚುನಾವಣೆಯೂ ಲಕ್ಷ್ಮಿ ಹೆಬ್ಬಾಳ್ಕರ್ ವರ್ಸಸ್ ರಮೇಶ್ ಜಾರಕಿಹೊಳಿ ಎಂಬಂತಾಗಿದೆ.
ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ರಮೇಶ್ ಜಾರಕಿಹೊಳಿ ಥೂ ಥೂ ಎನ್ನುತ್ತಾ ಮುಂದೆ ಸಾಗಿದ್ದಾರೆ.









